More

    ಮಾತು ತಪ್ಪದೇ ಬದ್ಧತೆ ತೋರುವುದು ನಮ್ಮಿಂದ ಮಾತ್ರ ಸಾಧ್ಯ; ಬಿಜೆಪಿ ವಿರುದ್ಧ ಜೆಡಿಎಸ್​ ವಾಗ್ದಾಳಿ

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ನಿಮಿತ್ತ ಸೋಮವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿತ್ತು.

    ಇನ್ನು ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿರುವ ಕುರಿತು ಸರಣಿ ಟ್ವೀಟ್​ಗಳನ್ನು ಮಾಡುವ ಮೂಲಕ ಜೆಡಿಎಸ್​ ಹರಿಹಾಯ್ದಿದೆ.

    ಬರೀ ಅಪಪ್ರಚಾರ ಮಾಡುವುದರಲ್ಲಿ ಸೈ ಎನಿಸಿಕೊಳ್ಳುತ್ತದೆ

    ಗೋಸುಂಬೆ ರಾಜಕಾರಣದ ಶಿಖರಕ್ಕೇರಿ, ಜನತೆಗೆ ಮಂಕುಬೂದಿ ಎರಚುವ ಬಿಜೆಪಿ ಪಕ್ಷವು ಬರೀ ಅಪಪ್ರಚಾರ ಮಾಡುವುದರಲ್ಲಿ ಸೈ ಎನಿಸಿಕೊಳ್ಳುತ್ತದೆ. ಕುಟುಂಬ ರಾಜಕಾರಣ ಅಂತೆಲ್ಲ ಕತೆ ಹೇಳುತ್ತಾ, ತಾನು ಮಾತ್ರ ಕುಟುಂಬ ಸದಸ್ಯರಿಗೆ ಟಿಕೆಟ್ ಘೋಷಣೆ ಮಾಡಿ ಠೇಂಕರಿಸುತ್ತದೆ. ಇಂತಹ ನಾಚಿಕೆಗೆಟ್ಟ ರಾಜಕಾರಣ ಹೇಸಿಗೆ ತರಿಸುವಂತದ್ದು ಎಂದು ಕಿಡಿಕಾರಿದೆ.

    ಮಾತು ತಪ್ಪದೇ ಬದ್ಧತೆ ತೋರುವುದು ನಮ್ಮಿಂದ ಮಾತ್ರ ಸಾಧ್ಯ

    ಜೆಡಿಎಸ್ ಪಕ್ಷವು ಮಾತು ಕೊಟ್ಟಂತೆ ಹಾಸನದ ಟಿಕೆಟ್ ಅನ್ನು ಪಕ್ಷದ ನಿಷ್ಠಾವಂತ ಕಾರ್ಯಕರ್ತ ಸ್ವರೂಪ್ ಅವರಿಗೆ ನೀಡಿದೆ. ಮಾತು ತಪ್ಪದೇ ಬದ್ಧತೆ ತೋರುವುದು ನಮ್ಮಿಂದ ಮಾತ್ರ ಸಾಧ್ಯ.

    ಇದನ್ನೂ ಓದಿ: RCB vs CSK ಪಂದ್ಯದ ವೇಳೆ ನಿಯಮ ಉಲ್ಲಂಘನೆ; ವಿರಾಟ್​ ಕೊಹ್ಲಿಗೆ ದಂಡ

    ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಮಗ ಕಟ್ಟಾ ಜಗದೀಶ್ ಗೆ ಟಿಕೆಟ್ ಘೋಷಿಸಿರುವ ಬಿಜೆಪಿಗೆ ಕುಟುಂಬ ರಾಜಕಾರಣ ಎಂದು ಮಾತನಾಡಲು ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದೆ.

    ಹಲಾಲುಟೋಪಿ ರಾಜಕಾರಣ ಬಿಜೆಪಿಯದ್ದು

    ಸೋಮವಾರ ಬಿಡುಗಡೆಯಾದ ಬಿಜೆಪಿಯ ಮೂರನೇ ಪಟ್ಟಿಯಲ್ಲಿ ಸಂಸದ ಕರಡಿ ಸಂಗಣ್ಣನವರ ಹಿರಿ ಸೊಸೆ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿಯವರ ಪತ್ನಿಗೂ ಟಿಕೆಟ್ ನೀಡಲಾಗಿದೆ.

    ಇವರೆಲ್ಲರ ನಡುವೆ ಮೋಸಗೊಂಡವರು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪನವರು,‌ ಪಾಪ! ಮಾತಿಗೂ ಕೃತಿಗೂ ಸಂಬಂಧವೇ ಇಲ್ಲದ ಹಲಾಲುಟೋಪಿ ರಾಜಕಾರಣ ಬಿಜೆಪಿಯದ್ದು ಎಂದು ಸರಣಿ ಟ್ವೀಟ್​ ಮಾಡುವ ಮೂಲಕ ಜೆಡಿಎಸ್​ ಹರಿಹಾಯ್ದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts