More

    ರಾಜೀನಾಮೆ ನೀಡಿ ಶಕ್ತಿ ತೋರಿಸಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೇಳಿದ್ದು ಯಾರಿಗೆ ?

    ಹಾಸನ: ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಈಗಲೇ ಮೀಸಲಾತಿ ಪ್ರಕಟಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಆಗ್ರಹಿಸಿದರು.

    ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಫಲಿತಾಂಶದ ಬಳಿಕ ಮೀಸಲಾತಿ ನಿಗದಿ ಮಾಡುವುದಾದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಇರುವಲ್ಲಿ ಮೀಸಲಾತಿ ಕಲ್ಪಿಸಲಾಗುತ್ತದೆ. ಹಾಸನ ಜಿಲ್ಲಾ ಪಂಚಾಯಿತಿ, ನಗರಸಭೆಗಳಲ್ಲೂ ಇದೇ ತಂತ್ರಗಾರಿಕೆ ಮಾಡಿ ಬಹುಮತ ಹೊಂದಿದ್ದ ಜೆಡಿಎಸ್‌ಗೆ ಅಧಿಕಾರ ತಪ್ಪಿಸಲಾಗಿದೆ. ಸರ್ಕಾರಕ್ಕೆ ಸಾಮಾಜಿಕ ನ್ಯಾಯ ಕಾಪಾಡುವ ಕಾಳಜಿ ಇದ್ದರೆ ಫಲಿತಾಂಶ ಪ್ರಕಟವಾಗುವ ಮುನ್ನವೇ ಮೀಸಲಾತಿ ಪ್ರಕಟಿಸಬೇಕು ಎಂದು ಆಗ್ರಹಿಸಿದರು.
    ಜಿಲ್ಲೆಯಲ್ಲಿ ಶೇ. 70 ರಷ್ಟು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಕೆಲವು ಕಡೆ ನಮ್ಮ ಪಕ್ಷದ ಬೆಂಬಲಿತರನ್ನು ಸೋಲಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಒಳಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸಿದರು.

    ಪಕ್ಷ ವಿರೋಧಿ ಹೇಳಿಕೆ ನೀಡುವವರು ಮೊದಲು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಶಾಸಕರಾದ ಜಿ.ಟಿ. ದೇವೇಗೌಡ ಹಾಗೂ ಗುಬ್ಬಿ ಶ್ರೀನಿವಾಸ್ ದಡ್ಡರೇನಲ್ಲ. ರಾಜೀನಾಮೆ ನೀಡಿ ಬಳಿಕ ತಮ್ಮ ಶಕ್ತಿ ಪ್ರದರ್ಶನ ಮಾಡಿಕೊಳ್ಳಲಿ. ಪಕ್ಷದಲ್ಲಿದ್ದುಕೊಂಡು ಅಪಸ್ವರ ಎತ್ತುವುದನ್ನು ನಿಲ್ಲಿಸಬೇಕು ಎಂದು ಎಚ್ಚರಿಕೆ ನೀಡಿದರು.

    ಸಿಎಂ ಇಬ್ರಾಹಿಂ ಸೇರಿದಂತೆ ಯಾವುದೇ ನಾಯಕರು ಜೆಡಿಎಸ್‌ಗೆ ಬಂದರೂ ಸ್ವಾಗತಿಸುತ್ತೇವೆ. ಯಾವ ಕಾರಣಕ್ಕೂ ಬಿಜೆಪಿ ಅಥವಾ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜ. 15ರ ನಂತರ ರಾಜ್ಯ, ಜಿಲ್ಲಾ ಮಟ್ಟದಲ್ಲಿ ಸಮಾವೇಶ ಏರ್ಪಡಿಸಿ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು. ಈ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಜತೆಗೆ ಚರ್ಚಿಸಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts