ಈ ಬಾರಿ ಜೆಡಿಎಸ್​ ಅಧಿಕಾರಕ್ಕೆ ಬರುವುದು ಖಚಿತ: ಕುಮಾರಸ್ವಾಮಿ

ಮೈಸೂರು: ಮೇ 12ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ನಿಗದಿಯಾದ ಹಿನ್ನೆಲೆ ಚುನಾವಣಾ ದಿನಾಂಕವನ್ನು ಮಾಜಿ ಸಿಎಂ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದೇನೆ. ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಜನರು ಬೇಸರಗೊಂಡಿದ್ದಾರೆ. ಈ ಬಾರಿ ಜೆಡಿಎಸ್​ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದರು.

ಪಕ್ಷದ ಹೆಸರಿನಿಂದ ಈ ಬಾರಿ ಅಧಿಕಾರ ಪಡೆಯಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಪಕ್ಷಗಳಿಗೆ ತಿರುಗೇಟು ನೀಡಿದರು. (ದಿಗ್ವಿಜಯ ನ್ಯೂಸ್​)

 

Leave a Reply

Your email address will not be published. Required fields are marked *