More

    ಕಾರ್ಯಕರ್ತರು ಜನರ ಸಮಸ್ಯೆಗೆ ಸ್ಪಂದಿಸಬೇಕು

    ಶೃಂಗೇರಿ: ಜೆಡಿಎಸ್, ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದಾಗ 26 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಿದ್ದಾರೆ ಎಂದು ಜೆಡಿಎಸ್ ಉಪಾಧ್ಯಕ್ಷ ಎಚ್.ಜಿ.ವೆಂಕಟೇಶ್ ಹೇಳಿದರು.

    ಶನಿವಾರ ಜೆಡಿಎಸ್ ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಜೆಡಿಎಸ್ ನೇತೃತ್ವ ವಹಿಸಿಕೊಂಡವರು ಪಕ್ಷದ ಉನ್ನತಿಗಾಗಿ ನಿರಂತರ ದುಡಿಯಬೇಕು. ಕಾರ್ಯಕರ್ತರ ಪ್ರೀತಿ, ವಿಸ್ವಾಸ ಗಳಿಸಬೇಕು. ಪ್ರತಿ ಚುನಾವಣೆಯಲ್ಲೂ ಪಕ್ಷ ಗೆಲ್ಲುವ ಕಾರ್ಯತಂತ್ರ ರೂಪಿಸಿಕೊಳ್ಳಬೇಕು. ಜನಸಾಮಾನ್ಯರ ಸಮಸ್ಯೆಗಳನ್ನು ಅರಿತು ಅವರಿಗೆ ನೆರವಾಗಲು ಕಾರ್ಯಕರ್ತರು ಶ್ರಮಿಸಬೇಕು ಎಂದರು.

    ನಿಕಟಪೂರ್ವ ಅಧ್ಯಕ್ಷ ಜಿ.ಜಿ.ಮಂಜುನಾಥ್ ಮಾತನಾಡಿ, ಕಾರ್ಯಕರ್ತರು ನೀಡಿದ ಸಹಕಾರ ಜತೆಗೆ ಪಕ್ಷದ ಹಿತವನ್ನು ಕಾಪಾಡಿದ ತೃಪ್ತಿ ನನಗಿದೆ. ಮುಂಬರುವ ದಿನಗಳಲ್ಲಿ ನೂತನ ಅಧ್ಯಕ್ಷರಿಗೂ ಸಹಕಾರ ನೀಡಿ ಪಕ್ಷದ ಹಿತಕ್ಕೆ ಶ್ರಮಿಸಲಾಗುವುದು ಎಂದು ತಿಳಿಸಿದರು.

    ಜೆಡಿಎಸ್ ತಾಲೂಕು ಘಟಕದ ನೂತನ ಅಧ್ಯಕ್ಷ ಟಿ.ಟಿ.ಕಳಸಪ್ಪ ಮಾತನಾಡಿ, ಪ್ರತಿ ಸೋಮವಾರ ತಾಲೂಕು ಕಚೇರಿ ಮತ್ತಿತರ ಸರ್ಕಾರಿ ಕಚೇರಿಯಲ್ಲಿ ನಮ್ಮ ಕಾರ್ಯಕರ್ತರು ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸುತ್ತಾರೆ. ಜನರ ಸಂಕಷ್ಟಕ್ಕೆ ಸ್ಪಂದಿಸುವುದು ನಮ್ಮ ಉದ್ದೇಶ. ಮುಂಬರುವ ಗ್ರಾಪಂ ಚುನಾವಣೆಯಲ್ಲಿ ರಾಜ್ಯ ನಾಯಕರ ನಿರ್ದೇಶನದಂತೆ ಇತರ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ತಾಲೂಕಿನ ಜನರು ಪಕ್ಷವನ್ನು ಬೆಂಬಲಿಸಿ ಸಹಕಾರ ನೀಡಬೇಕು ಎಂದರು.

    ಜೆಡಿಎಸ್ ಮುಖಂಡರಾದ ಜಮಾಲ್​ಸಾಬ್, ಭರತ್ ಗಿಣಿಕಲ್, ಸುಗನಿ ಕಾಡಪ್ಪ ಗೌಡ, ಕ್ಷೇತ್ರಾಧ್ಯಕ್ಷ ಭಂಡಿಗಡಿ ದಿವಾಕರ್ ಭಟ್, ನೂತನ ಕಾರ್ಯದರ್ಶಿ ಕಲ್ಕಟ್ಟೆ ದಿನೇಶ್ ಹೆಗ್ಡೆ, ಅಶೋಕ್ ಹೆಗ್ಡೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts