ಹಲಗೂರಿನಲ್ಲಿ ಜೆಡಿಸ್ ಕಾರ್ಯಕರ್ತರ ಸಭೆ

ಹಲಗೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಮಾ.25ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಶಾಸಕ ಡಾ.ಕೆ.ಅನ್ನದಾನಿ ಹೇಳಿದರು.

ಇಲ್ಲಿನ ಸಪ್ತಗಿರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಮಳವಳ್ಳಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿದೆ. ಹನಿ ನೀರಾವರಿಗೆ ಹೆಚ್ಚಿನ ಒತ್ತು ನೀಡಿದೆ. ಹೀಗಾಗಿ ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ನಿಖಿಲ್‌ಕುಮಾರಸ್ವಾಮಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಮಾತನಾಡಿ, ಚುನಾವಣೆಯಲ್ಲಿ ನಾವು ಎರಡು ಪಕ್ಷಗಳ ವರಿಷ್ಠರ ತೀರ್ಮಾನದಂತೆ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.