More

    ಮೂರ್ನಾಡುವಿನಲ್ಲಿ ಜೆಡಿಎಸ್ ರೋಡ್ ಶೋ

    ಮಡಿಕೇರಿ:
    ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ನಾಪಂಡ ಮುತ್ತಪ್ಪ ವಿರುದ್ಧ ರಾಷ್ಟ್ರೀಯ ಪಕ್ಷಗಳು ಮಾಡುತ್ತಿರುವ ಅಪಪ್ರಚಾರಗಳಿಗೆ ಕ್ಷೇತ್ರದ ಮತದಾರರ ಮೇ ೧೦ ರಂದು ತಕ್ಕ ಉತ್ತರ ನೀಡಲಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಾಸೀರ್ ಮೂರ್ನಾಡು ಹೇಳಿದರು. ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ಸೋಲಿನ ಭಯದಿಂದ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ.

    ಕೋಮುವಾದ ಮತ್ತು ಬಿಜೆಪಿಯನ್ನು ವಿರೋಧ ಮಾಡುತ್ತಾ ಬಂದಿರುವ ಕೊಡಗಿನ ಏಕೈಕ ನಾಯಕ ನಾಪಂಡ ಮುತ್ತಪ್ಪ. ಜಾತ್ಯತೀತ ತತ್ವವನ್ನು ಗಟ್ಟಿಯಾಗಿ ತನ್ನ ಜೀವನದಲ್ಲಿ ಅಳವಡಿಸಿಕೊಂಡಿರುವ ನಾಪಂಡ ಮುತ್ತಪ್ಪ ಈ ಬಾರಿ ಗೆಲುವು ಸಾಧಿಸಲಿದ್ದಾರೆ. ಇದನ್ನು ಸಹಿಸದ ರಾಷ್ಟ್ರೀಯ ಪಕ್ಷಗಳು ಕುತಂತ್ರ ನಡೆಸಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದು ಮೂರ್ನಾಡುವಿನಲ್ಲಿ ಗುರುವಾರ ನಡೆದ ಜೆಡಿಎಸ್ ಸಾರ್ವಜನಿಕ ಸಭೆಯಲ್ಲಿ ಹೇಳಿದರು.

    ಜಿಲ್ಲೆಯಲ್ಲಿ ಈ ಬಾರಿ ಮತದಾರರು ಬದಲಾವಣೆ ಬಯಸಿದ್ದಾರೆ. ನಾಪಂಡ ಮುತ್ತಪ್ಪ ತಳಮಟ್ಟದಿಂದ ಬೆಳೆದು ಬಂದ ನಾಯಕ. ಕಾರ್ಮಿಕ ಸಂಘಟನೆಯಲ್ಲಿ, ಕಾರ್ಮಿಕರ ಧ್ವನಿಯಾಗಿ ಕೆಲಸ ಮಾಡಿದವರು.

    ಮಡಿಕೇರಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ವಿಶೇಷ ಯೋಜನೆ ಕೈಗೊಂಡು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂದರು.
    ನಾಪಂಡ ಮುತ್ತಪ್ಪ ಮಾತನಾಡಿ, ಅಭಿವೃದ್ಧಿಯಲ್ಲಿ ಮಡಿಕೇರಿ ಕ್ಷೇತ್ರ ಹಿಂದುಳಿದಿದೆ. ಕೊಡಗಿನ ರಸ್ತೆಗಳ ಅಭಿವೃದ್ಧಿಗೆ ೫ ಸಾವಿರಕ್ಕೂ ಅಧಿಕ ಕೋಟಿ ರೂ. ಬೇಕಾಗಿದೆ. ಎಲ್ಲಾ ರೀತಿಯ ಕೋಮುವಾದವನ್ನು ನಾನು ವಿರೋಧ ಮಾಡುತ್ತಾ ಬೆಳೆದವನು. ಸಾಮಾಜಿಕ ಜಾಲತಾಣದಲ್ಲಿ ನಡೆಸುತ್ತಿರುವ ಅಪಪ್ರಚಾರಗಳಿಗೆ ಗೆಲುವು ಸಿಗಲ್ಲ. ಕೊಡಗಿನ ಜನರು ಸ್ವಾಭಿಮಾನಿಗಳು, ಹೊರಗಿನವರಿಗೆ ಮಣೆ ಹಾಕುವುದಿಲ್ಲ.

    ಈ ಬಾರಿ ಮಡಿಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಇದಕ್ಕೂ ಮೊದಲು ಅಯ್ಯಪ್ಪ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರೋಡ್ ಶೋ ಮೂಲಕ ನಾಪಂಡ ಮುತ್ತಪ್ಪ ಮೂರ್ನಾಡು ಪಟ್ಟಣದಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭ ಜಿಲ್ಲಾ ಜೆಡಿಎಸ್ ಹಿರಿಯ ಉಪಾಧ್ಯಕ್ಷ ಬಲ್ಲಚಂಡ ಗೌತಮ್, ಯೂಸುಪ್ ಹಾಜಿ ಕೊಂಡಂಗೇರಿ, ಶಿವದಾಸ್ ನೆಲ್ಲಿಹುದಿಕೇರಿ, ಜಿಲ್ಲಾ ಯುವ ಜೆಡಿಎಸ್ ವಕ್ತಾರ ಜಿನಾಸುದ್ದೀನ್ ಸುಂಟ್ಟಿಕೊಪ್ಪ, ನಾಪಂಡ ರವಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಪಿ.ಎಂ ಮಂಜುನಾಥ್, ಸೈಫುದ್ದೀನ್ ಚಾಮಿಯಾಲ್ ಹಾಗೂ ಜೆಡಿಎಸ್ ಮೂರ್ನಾಡು ಭಾಗದ ಮುಖಂಡರುಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts