22.5 C
Bengaluru
Sunday, January 19, 2020

ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಭಯೋತ್ಪಾದನಾ ಸಂಘಟನೆಗೆ ನಾಯಕತ್ವವೇ ಇಲ್ಲದಂತಾಗಿದೆ: ಯಾವುದದು ಸಂಘಟನೆ?

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದು ಭಯೋತ್ಪಾದನೆ ಸಂಘಟನೆಯ ನಾಯಕತ್ವವೇ ಸಂಪೂರ್ಣವಾಗಿ ಇಲ್ಲವಾಗಿದೆಯಂತೆ! ಹೌದು. ಕೆಲದಿನಗಳ ಹಿಂದೆ ಭಯೋತ್ಪಾದನೆ ಸಂಘಟನೆಗಳನ್ನು ಸೇರದಂತೆ ಮಕ್ಕಳನ್ನು ತಡೆಯಬೇಕು ಎಂದು ಭಾರತೀಯ ಸೇನಾಪಡೆ ಅಧಿಕಾರಿಗಳು ಮತ್ತು ಯೋಧರು ಕಣಿವೆ ರಾಜ್ಯದ ತಾಯಂದಿರಲ್ಲಿ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಈಗ ಸಕಾರಾತ್ಮಕ ಪ್ರತಿಕ್ರಿಯೆ ದೊರೆಯಲಾರಂಭಿಸಿದೆ. ಇದರಿಂದಾಗಿ ಜೈಶ್​ ಎ ಮೊಹಮ್ಮದ್​ ಉಗ್ರ ಸಂಘಟನೆಗೆ ನಾಯಕತ್ವವೇ ಇಲ್ಲದಂತಾಗಿದೆ ಎಂದು ಭಾರತೀಯ ಸೇನಾಪಡೆಯ ಚಿನಾರ್​ ಕೋರ್​ನ ಲೆಫ್ಟಿನೆಂಟ್​ ಜನರಲ್​ ಕೆ.ಜೆ.ಎಸ್​. ಧಿಲ್ಲೋನ್​ ತಿಳಿಸಿದ್ದಾರೆ.

ಶನಿವಾರ ನಡೆದ ಶೋಫಿಯಾನ್​ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದರು. ಏ.3ರಂದು ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿದ್ದ ಇಂಜಿನಿಯರ್​ ಪದವೀಧರ ಸತ್ತರವ ಪೈಕಿ ಒಬ್ಬನಾಗಿದ್ದ. ಈ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್​ ಕರ್ನಲ್​ ಕೆ.ಜೆ.ಎಸ್​. ಧಿಲ್ಲೋನ್​ ತಮ್ಮ ಮಕ್ಕಳನ್ನು ಹಿಂಸಾ ಮಾರ್ಗ ಅನುಸರಿಸದಂತೆ ತಡೆಯುವಂತೆ ಕಣಿವೆ ರಾಜ್ಯದ ತಾಯಂದಿರಲ್ಲಿ ಮತ್ತೊಮ್ಮೆ ಮನವಿ ಮಾಡಿಕೊಂಡರು. ಅಲ್ಲದೆ, ಈ ಹಿಂದೆ ಭಾರತೀಯ ಸೇನಾಪಡೆ ಈ ಬಗ್ಗೆ ಮಾಡಕೊಂಡಿದ್ದ ಮನವಿಗೆ ಉತ್ತಮ ಸ್ಪಂದನೆ ದೊರೆಯುತ್ತಿರುವುದಾಗಿ ತಿಳಿಸಿದರು.

ನಿಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ, ಭವ್ಯ ಭವಿಷ್ಯದ ಕನಸು ಕಟ್ಟಿಕೊಂಡಿರುತ್ತೀರಿ. ಆದರೆ, ಅವರು ಹಿಂಸಾ ಮಾರ್ಗದತ್ತ ಆಕರ್ಷಿತರಾಗಿ ಭಯೋತ್ಪಾದನಾ ಸಂಘಟನೆಗಳನ್ನು ಸೇರಿಕೊಳ್ಳುತ್ತಿದ್ದಾರೆ. ಹೀಗೆ ಉಗ್ರ ಸಂಘಟನೆಯನ್ನು ಸೇರಿಕೊಂಡ ಕೆಲವೇ ದಿನಗಳಲ್ಲಿ ಅವರು ಹತರಾಗುತ್ತಿದ್ದಾರೆ. ಇಂತಹ ದುರ್ದಿನ ನೋಡುವ ದುಸ್ಥಿತಿ ಮತ್ತಾರಿಗೂ ಬರಬಾರದು ಎಂಬುದು ನಮ್ಮ ಅಪೇಕ್ಷೆ. ಹಾಗಾಗಿ ಉಗ್ರ ಸಂಘಟನೆಗಳಿಗೆ ಸೇರದೆ, ನಮ್ಮೆದುರು ಶರಣಾಗಿ ಎಂದು ಮನವಿ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದರು.

ಈ ಹಿಂದೆ ನಾವು ಮಾಡಿಕೊಂಡ ಮನವಿಗೆ ಕಣಿವೆ ರಾಜ್ಯದಾದ್ಯಂತ ಸಕಾರಾತ್ಮಕ ಸ್ಪಂದನೆ ದೊರೆಯುತ್ತಿದೆ. ಸಾಕಷ್ಟು ಯುವಕರು ಭಾರತೀಯ ಸೇನಾಪಡೆ ಎದುರು ಶರಣಾಗಿದ್ದಾರೆ. ಅವರಲ್ಲಿ ಕೆಲವರನ್ನು ಜೀವನದಲ್ಲಿ ಉತ್ತಮ ರೀತಿಯಲ್ಲಿ ನೆಲೆಗೊಳಿಸಲಾಗಿದೆ ಎಂದರು.

ಕೆಲದಿನಗಳ ಹಿಂದೆ ನಡೆದ ಪುಲ್ವಾಮಾ ಆತ್ಮಾಹುತಿ ದಾಳಿ ಬಳಿಕ ಜೈಶ್​ ಎ ಮೊಹಮ್ಮದ್​ ಸಂಘಟನೆಯನ್ನು ಗುರಿಯಾಗಿಸಿಕೊಂಡು ಇಂತಹ ಕಾರ್ಯಾಚರಣೆ ಮಾಡಿದೆವು. ಈಗ ಅದು ಕೂಡ ಫಲನೀಡಲಾರಂಭಿಸಿದೆ. ಕಣಿವೆ ರಾಜ್ಯದಲ್ಲಿ ಜೈಶ್​ ಎ ಮೊಹಮ್ಮದ್​ ಉಗ್ರ ಸಂಘಟನೆಗೆ ನಾಯಕತ್ವವೆ ಇಲ್ಲದಂತಾಗಿದೆ ಎಂದು ತಿಳಿಸಿದರು. (ಏಜೆನ್ಸೀಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...