More

    ಅಕ್ರಮ ಹಣ ವರ್ಗಾವಣೆ ಪ್ರಕರಣ; ಜೆಟ್​ ಏರ್​ವೇಸ್​ ಸಂಸ್ಥಾಪಕ ನರೇಶ್​ ಗೋಯಲ್​ 10ದಿನ ಇಡಿ ವಶಕ್ಕೆ

    ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್​ ಏರ್​ವೇಸ್​ ಸಂಸ್ಥಾಪಕ ನರೇಶ್​ ಗೋಯಲ್​ ಅವರನ್ನು ನ್ಯಾಯಾಲಯ ಸೆಪ್ಟೆಂಬರ್​ 11ರವರೆಗೆ ಜಾರಿ ನಿರ್ದೇಶನಾಲಯ (ED)ದ ವಶಕ್ಕೆ ನೀಡಿದೆ.

    ಕೆನರಾ ಬ್ಯಾಂಕ್​ಗೆ ಸಂಬಂಧಿಸಿದ್ದು ಎನ್ನಲಾದ 538 ಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆಯಲ್ಲಿ ಜಾರಿ ನಿರ್ದೇಶನಾಲಯ ಶುಕ್ರವಾರ ತಡರಾತ್ರಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತ್ತು.

    ಇದನ್ನೂ ಓದಿ: VIDEO| ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಪ್ರತಿಭಟನೆ; 360 ಮಂದಿ ವಿರುದ್ಧ ಪ್ರಕರಣ ದಾಖಲು

    ಮುಂಬೈನ ಇಡಿ ಕಚೇರಿಯಲ್ಲಿ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆಗಟ್ಟುವಿಕೆ ಕಾಯ್ದೆ (PMLA) ಅಡಿಯಲ್ಲಿ ಗೋಯಲ್​ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿತ್ತು. ​74 ವರ್ಷದ ಗೋಯಲ್​ ಅವರನ್ನು ಶನಿವಾರ ಮುಂಬೈನ ಪಿಎಂಎಲ್​ಎ ವಿಶೇಷ ಕೋರ್ಟ್​​ಗೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್​ 11ರವೆರೆಗೆ ಇಡಿ ವಶಕ್ಕೆ ನೀಡಲಾಗಿದೆ.

    ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್ ಸಂಸ್ಥಾಪಕ ಗೋಯಲ್ ಮತ್ತು ಅವರ ಪತ್ನಿ ಅನಿತಾ ಮತ್ತು ಕಂಪನಿಯ ಕೆಲವು ಮಾಜಿ ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (CBI) ಎಫ್​ಐಆರ್​ ದಾಖಲಿಸಿದ್ದು, ಇದರ ಆಧಾರದ ಮೇಲೆ ವಿಚಾರಣೆ ನಡೆಸಲಾಗುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts