More

    ಸರ್ವರ ಏಳಿಗೆ ಬಯಸುವ ವೀರಶೈವ ಸಮಾಜ; ಯಡಿಯೂರಪ್ಪ

    ಶಿವಮೊಗ್ಗ: ಪ್ರಾಚೀನ ಪರಂಪರೆ, ಸಮಾನತೆ, ಸಹೋದರತ್ವ, ಸರ್ವರ ಏಳಿಗೆ ಮತ್ತು ಮಾನವ ಕುಲದ ಸಮಗ್ರ ಅಭಿವೃದ್ಧಿಯನ್ನು ವೀರಶೈವ ಸಮಾಜ ಸದಾ ಕಾಲ ಬಯಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
    ಜೆ.ಎಚ್.ಪಟೇಲ್ ಬಡಾವಣೆಯಲ್ಲಿ ಶ್ರೀ ವೀರಶೈವ ಕಲ್ಯಾಣ ಮಂದಿರದ ಆಡಳಿತ ಮಂಡಳಿ ಮತ್ತು ವೀರಶೈವ ಸಮಾಜದಿಂದ 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸುಸಜ್ಜಿತ ವೀರಶೈವ ಸಾಂಸ್ಕೃತಿಕ ಭವನ ಉದ್ಘಾಟಿಸಿ ಮಾತನಾಡಿದ ಅವರು, ಲೋಕದ ಹಿತ ಕಾಪಾಡುವುದು ವೀರಶೈವ ಸಮಾಜದ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಜವಾಬ್ದಾರಿ ವೀರಶೈವ ಸಮಾಜದ ಮೇಲಿದೆ ಎಂದು ಹೇಳಿದರು.
    ಬಸವಾದಿ ಶರಣರು, ಶಿವಶರಣರು ಸಾರಿದ ವಚನ ಸಂದೇಶಗಳನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ಕಾಯಕವೇ ಕೈಲಾಸ ಎಂಬಂತೆ ಸಮಾಜದ ಏಳಿಗೆಗೆ ಶ್ರಮ ವಹಿಸಿ ಇಡೀ ಜೀವನವನ್ನೇ ಮುಡಿಪಾಗಿಡಬೇಕು ಎಂದು ಹೇಳಿದರು.
    ಶಾಸಕ ಕೆ.ಎಸ್.ಈಶ್ವರಪ್ಪ ಮಾತನಾಡಿ, ವೀರಶೈವ ಸಾಂಸ್ಕೃತಿಕ ಭವನವು ಸಮಾಜದ ದೊಡ್ಡ ಆಸ್ತಿ. ಸಮಾಜದ ಎಲ್ಲ ಬಂಧುಗಳ ಸಹಕಾರದಿಂದ ಭವನ ನಿರ್ಮಾಣ ಆಗಿದೆ. ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆ ಎಂದು ಹೇಳಿದರು.
    ಯಡಿಯೂರು ಕ್ಷೇತ್ರ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಮಳಲಿಮಠ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಬಿಳಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶ್ರೀ ವೀರಶೈವ ಕಲ್ಯಾಣ ಮಂದಿರ ಅಧ್ಯಕ್ಷ ಟಿ.ವಿ.ಈಶ್ವರಯ್ಯ ಅಧ್ಯಕ್ಷತೆ ವಹಿಸಿದ್ದರು.
    ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಅಶೋಕ ನಾಯ್ಕ್, ಎಂಎಲ್‌ಸಿ ಎಸ್.ರುದ್ರೇಗೌಡ, ಮೇಯರ್ ಎಸ್.ಶಿವಕುಮಾರ್, ಉಪ ಮೇಯರ್ ಲಕ್ಷ್ಮೀ ಶಂಕರನಾಯ್ಕ, ಎಂಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ, ಸರ್ಜಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ಟ್ರಸ್ಟಿ ಡಾ. ಧನಂಜಯ್ ಸರ್ಜಿ, ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಸೂಡಾ ಅಧ್ಯಕ್ಷ ಎನ್.ಜಿ.ನಾಗರಾಜ್, ಮಹಾನಗರ ಪಾಲಿಕೆ ಸದಸ್ಯರಾದ ಆಶಾ ಚಂದ್ರಪ್ಪ, ಸುನೀತಾ ಅಣ್ಣಪ್ಪ, ಎಚ್.ಸಿ.ಯೋಗೇಶ್, ಅನಿತಾ ರವಿಶಂಕರ್, ಧೀರರಾಜ್ ಹೊನ್ನವಿಲೆ, ಈ.ವಿಶ್ವಾಸ್, ಮುಖಂಡರಾದ ಎಸ್.ಮಲ್ಲೇಶಪ್ಪ, ಕೆ.ಎಸ್.ತಾರಾನಾಥ್, ರುದ್ರಮುನಿ ಎನ್.ಸಜ್ಜನ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts