More

  ತೆಲಂಗಾಣ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ನೇಮಕ: ಜೊತೆಗೆ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಜವಾಬ್ದಾರಿ

  ತೆಲಂಗಾಣ: ರಾಜ್ಯದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ಅವರು ನೇಮಕಗೊಂಡಿದ್ದಾರೆ. ರಾಧಾಕೃಷ್ಣನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ. ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ತೆಲಂಗಾಣದ ರಾಜ್ಯಪಾಲರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ಮಂಗಳವಾರ ನೀಡಲಾಗಿದೆ.

  ಇದನ್ನೂ ಓದಿ: ಕೋಚಿಂಗ್​ಗೆ ಹೊರಟಿದ್ದ ವಿದ್ಯಾರ್ಥಿನಿಗೆ ಕಾದಿತ್ತು ಶಾಕ್​: ಮಗಳ ಬಗ್ಗೆ ಶಾಕಿಂಗ್‌ ಹೇಳಿಕೆ ನೀಡಿದ ತಂದೆ!

  ರಾಷ್ಟ್ರಪತಿ ಭವನ ಪತ್ರಿಕಾ ಹೇಳಿಕೆ ಪ್ರಕಾರ ತೆಲಂಗಾಣ ರಾಜ್ಯಪಾಲ ತಮಿಳ್​ ಸಾಯಿ ಸೌಂದರರಾಜ್ ಅವರ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ ಬಳಿಕ ಈ ನೇಮಕ ಮಾಡಲಾಗಿದೆ. ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿಯೂ ಸೇವೆ ಸಲ್ಲಿಸಿರುವ ಸೌಂದರರಾಜನ್ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.

  ತೆಲಂಗಾಣ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಅವರ ಹೆಚ್ಚುವರಿ ಜವಾಬ್ದಾರಿಗಳನ್ನು ಸಹ ನಿರ್ವಹಿಸುತ್ತಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

  ರಾಧಾಕೃಷ್ಣನ್ ಮಂಗಳವಾರ ಸಂಜೆ ಅಥವಾ ಬುಧವಾರ ಬೆಳಗ್ಗೆ ತೆಲಂಗಾಣ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ ಎಂದು ತೆಲಂಗಾಣ ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತೆಲಂಗಾಣದಲ್ಲಿ ಸತತ ಅವಧಿಗೆ ಗವರ್ನರ್ ಹುದ್ದೆಯನ್ನು ಅಲಂಕರಿಸಿದ ತಮಿಳುನಾಡಿನ ಮೂರನೇ ವ್ಯಕ್ತಿ ರಾಧಾಕೃಷ್ಣನ್, ಮೊದಲನೆಯವರು ಇಎಸ್ಎಲ್ ನರಸಿಂಹನ್, ನಂತರ ತಮಿಳಿಸೈ ಸೌಂದರರಾಜನ್ ಎನ್ನಲಾಗಿದೆ.

  ಬಿಜೆಪಿ ಅಭ್ಯರ್ಥಿಯಾಗಿ ಕೊಯಮತ್ತೂರಿನಿಂದ ಎರಡು ಬಾರಿ ಸಂಸತ್ ಸದಸ್ಯರಾಗಿದ್ದ ರಾಧಾಕೃಷ್ಣನ್ ಅವರು 2023 ರಲ್ಲಿ ಜಾರ್ಖಂಡ್‌ನ ರಾಜ್ಯಪಾಲರಾಗಿದ್ದಾರೆ.

  ರಾಷ್ಟ್ರಪತಿಗಳಿಗೆ ಧನ್ಯವಾದ ತಿಳಿಸಿದ ನೂತನ ರಾಜ್ಯಪಾಲರು: ತೆಲಂಗಾಣ ರಾಜ್ಯಪಾಲರಾಗಿ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸಲು ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಧನ್ಯವಾದ ಹೇಳುತ್ತೇನೆ. ಈ ಮಹತ್ವದ ಜವಾಬ್ದಾರಿ ನೀಡಿದ ನಮ್ಮ ಪ್ರೀತಿಯ ಮತ್ತು ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ನಮ್ಮ ಮಾತೃಭೂಮಿಗೆ ಸೇವೆ ಸಲ್ಲಿಸಲು ಹೆಚ್ಚಿನ ಜವಾಬ್ದಾರಿ. ಜೈ ಹಿಂದ್,” ಎಂದು ರಾಧಾಕೃಷ್ಣನ್ ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.

  ಮುಕೇಶ್ ಅಂಬಾನಿ ಮಗನ ಪ್ರೀ ವೆಡ್ಡಿಂಗ್ ಸಮಾರಂಭದಲ್ಲಿ ಶಾರುಖ್-ಸಲ್ಮಾನ್ ಕಿತ್ತಾಟ: ಅಮೀರ್ ಖಾನ್ ಬಿಚ್ಚಿಟ್ಟ ರಹಸ್ಯ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts