More

    ಆಫರೇಷನ್​ ಕಮಲ ಭೀತಿ: ಹೈದರಾಬಾದ್ ಆಗಮಿಸಿದ ಜೆಎಂಎಂ ಶಾಸಕರು

    ರಾಂಚಿ: ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಚಂಪೈ ಸೊರೆನ್ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ, ಆಡಳಿತಾರೂಢ ಜೆಎಂಎಂ ನೇತೃತ್ವದ ಒಕ್ಕೂಟದ ಶಾಸಕರು ಹೈದರಾಬಾದ್‌ಗೆ ಪ್ರಯಾಣ ಬೆಳೆಸಿದ್ದಾರೆ.

    ಇದನ್ನೂ ಓದಿ:ಅಪ್ಪನ ಜೊತೆ ಮಲಗಿದ್ದ ಒಂದು ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿಗಳು!

    cm

    ಆಪರೇಷನ್ ಕಮಲದ ಭೀತಿ ಇರುವುದರಿಂದ ಆಡಳಿತಾರೂಢ ಜೆಎಂಎಂ ಹಾಗೂ ಮಿತ್ರ ಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರ್ಕಾರವಿರುವ ತೆಲಂಗಾಣಕ್ಕೆ ತೆರಳಲು ನಿರ್ಧರಿಸಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ತಿಳಿಸಿದ್ದಾರೆ.

    ಸರ್ಕಾರದ ಬಹುಮತ ಸಾಬೀತಿಗೆ ನಮಗೆ 10 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ ವಿಶ್ವಾಸ ಮತಯಾಚನೆ ಫೆ. 5ರಂದೇ ನಡೆಯಲಿದೆ. ಇಂಥ ಸಂದರ್ಭದಲ್ಲಿ ಯಾವುದೇ ಅವಕಾಶವನ್ನು ವಿರೋಧಿಗಳಿಗೆ ನೀಡಲು ಸಿದ್ಧರಿಲ್ಲ. ನಮ್ಮ ಪಕ್ಷದ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುವ ಎಲ್ಲಾ ಸಾಧ್ಯತೆಗಳೂ ಇವೆ’ ಎಂದು ಮುಖಂಡರೊಬ್ಬರು ಪಿಟಿಐಗೆ ಹೇಳಿದ್ದಾರೆ.

    81 ಶಾಸಕರ ಜಾರ್ಖಂಡ್‌ ವಿಧಾನಸಭೆಯಲ್ಲಿ 43 ಸ್ಥಾನ ಶಾಸಕರ ಬೆಂಬಲ ಜೆಎಂಎಂ ನೇತೃತ್ವದ ಮೈತ್ರಿ ಸರ್ಕಾರ ಹೊಂದಿದೆ. ಇದಕ್ಕೆ ಪೂರಕವಾದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

    ವಿವಾದದ ನಡುವೆ ಮತ್ತೆರಡು ಫೋಟೊ ಹಂಚಿಕೊಂಡ ಪವಿತ್ರಾಗೌಡ! ನಟ ದರ್ಶನ್​ ಫ್ಯಾನ್ಸ್​ ಹೇಳಿದ್ದೇನು?  

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts