ನವದೆಹಲಿ: ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಗೆ ಸಂಬಂಧಿಸಿದ ಫ್ಲ್ಯಾಟ್‌ನಿಂದ 35 ಕೋಟಿ ರೂ.ಗೂ ಹೆಚ್ಚು ನಗದು ವಶಪಡಿಸಿಕೊಂಡ ಬೆನ್ನಲ್ಲೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಸಚಿವ ಆಲಂಗೀರ್ ಆಲಂ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ! ಶಂಕಿತನ ಬಂಧನ
ಮಂಗಳವಾರ ರಾಂಚಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಆಲಂಗೀರ್ ಆಲಂ ಅವರನ್ನು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಇಂದು (ಬುಧವಾರ) ಅವರನ್ನು ಮತ್ತೆ ವಿಚಾರಣೆಗೆ ಕರೆಯಲಾಗಿತ್ತು.
#WATCH | On ED arresting Jharkhand Minister and Congress leader Alamgir Alam, state BJP spokesperson Pratul Shah Deo says, " One more wicket of corruption has fallen in Jharkhand today…this was supposed to happen. From a servant's house, Rs 35 crore has been seized…this is… pic.twitter.com/oRNfqRBUi0
— ANI (@ANI) May 15, 2024
ಇಂದು ಮತ್ತೆ ಆರು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದ್ದು, ತನಿಖೆಗೆ ಸಹಕರಿಸದ ಕಾರಣ ಬಂಧಿಸಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.
ಕಳೆದ ವಾರ ರಾಂಚಿಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆ ಸಹಾಯಕ ಜಹಾಂಗೀರ್ ಆಲಂ ಅವರು ವಾಸವಾಗಿದ್ದ ಫ್ಲಾಟ್ ಮೇಲೆ ದಾಳಿ ನಡೆಸಿ ಇಡಿ ಅಧಿಕಾರಿಗಳು ಅಲ್ಲಿಂದ 35.23 ಕೋಟಿ ರೂ. ಹಾಗೂ ಇತರ ನಿವೇಶನಗಳಿಂದ 1.5 ಕೋಟಿಗೂ ರೂ.ಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದರಯ. ಅವರಿಂದ ಒಟ್ಟು 37 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ.
ಆಲಂಗೀರ್ ಆಲಂ ಮತ್ತು ಅವರ ಸಹಾಯಕರ ವಿರುದ್ಧದ ಪ್ರಕರಣವು ಜಾರ್ಖಂಡ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದೆ. ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಟೆಂಡರ್‌ಗೆ ಬದಲಾಗಿ ಕಮಿಷನ್‌ನಿಂದ ಬಂದ ಹಣ ಇದಾಗಿದೆ ಎಂದು ಆರೋಪಿಸಲಾಗಿದೆ.
ಮೇ 6ರಂದು, ಇಡಿ ಅಲಂಗೀರ್ ಆಲಂ ಅವರ ಪಿಎಸ್ ಮತ್ತು ಇತರ ನಿಕಟ ಸಹಚರರ ನಿವಾಸಗಳ ಮೇಲೆ ದಾಳಿ ನಡೆಸಿತು. ವಶಪಡಿಸಿಕೊಂಡ ಕರೆನ್ಸಿ ನೋಟುಗಳ ಎಣಿಕೆ ತಡರಾತ್ರಿಯೂ ಮುಂದುವರಿದಿದ್ದು, ಅವರಿಂದ ಒಟ್ಟು 37 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಆಲಂಗೀರ್ ಆಲಂ ಅವರು ಕಾಂಗ್ರೆಸ್ ಪಕ್ಷದಿಂದ 2000 ರಲ್ಲಿ ಜಾರ್ಖಂಡ್ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದರು. ಅವರು ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಸೊರೆನ್ ಅವರನ್ನು ಇಡಿ ವಶಕ್ಕೆ ತೆಗೆದುಕೊಂಡ ತಿಂಗಳ ನಂತರ ಅವರ ಬಂಧನವಾಗಿದೆ. ಸೋರೆನ್ ಅವರನ್ನು ಅಧಿಕೃತವಾಗಿ ಬಂಧಿಸುವ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
27 ವಾರಗಳ ಗರ್ಭಪಾತ ತೆಗೆಸಲು ಅನುಮತಿ ನಿರಾಕರಣೆ: ಭ್ರೂಣಕ್ಕೂ ಬದುಕುವ ಹಕ್ಕಿದೆ ಎಂದ ಕೋರ್ಟ್!