“ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ” ಏಪ್ರಿಲ್ ತಿಂಗಳ ಕಾರ್ಯಕ್ರಮ ಮುಂದೂಡಿಕೆ

blank

ಬೆಂಗಳೂರು: ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ” ಏಪ್ರಿಲ್ ತಿಂಗಳ ಕಾರ್ಯಕ್ರಮವನ್ನು ಮೂದೂಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಕಂದಾಯ ಇಲಾಖೆ ವತಿಯಿಂದ ಪ್ರತಿ ತಿಂಗಳ ಮೂರನೆ ಶನಿವಾರದಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿ/ತಹಸೀಲ್ದಾರರು ಮತ್ತು ಇತರೆ ಅಧಿಕಾರಿಗಳನ್ನು ಒಳಗೊಂಡ ತಂಡ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮದಡಿಯಲ್ಲಿ ಗ್ರಾಮ ಭೇಟಿ ನೀಡಿ ಅಲ್ಲಿಯೇ ಗ್ರಾಮ ವಾಸ್ತವ್ಯ ಮಾಡುತ್ತಿದ್ದರು.

ಇದನ್ನೂ ಓದಿ: ಕೋವಿಡ್​ನಿಂದ ಮೃತಪಟ್ಟವರಿಗೆ ಇಲ್ಲಿ ಉಚಿತವಾಗಿ ಅಂತ್ಯಸಂಸ್ಕಾರ; ಈ ಚಿತಾಗಾರಗಳು ಸೋಂಕಿತ ಶವಗಳಿಗೆಂದೇ ಮೀಸಲು

ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗದ 2ನೇ ಅಲೆಯು ರಾಜ್ಯದಲ್ಲಿ ಅತಿ ಹೆಚ್ಚಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಒಂದೆಡೆ ಗುಂಪು-ಗುಂಪಾಗಿ ಸೇರಿದಲ್ಲಿ ಈ ಸಾಂಕ್ರಾಮಿಕ ರೋಗವು ಇನ್ನೂ ಹೆಚ್ಚಾಗಿ ಹರಡುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಮತ್ತು ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಪ್ರಿಲ್ ಮಾಹೆಯ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಾಗೆಯೇ, ಏ 17 ರಂದು ಯಾದಗಿರಿ ಜಿಲ್ಲೆಯಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಭಾಗವಹಿಸುವಿಕೆಯನ್ನು ರದ್ದುಗೊಳಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರಲ್ಲಿ ಅವಿವಾಹಿತ ಅಕ್ಕ-ತಂಗಿ ಅನುಮಾನಾಸ್ಪದ ಸಾವು

ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಚುನಾವಣಾ ಪ್ರಚಾರಕ್ಕೆ ನಿಷೇಧ

TAGGED:
Share This Article

ladies finger Benefits : ಬೆಂಡೆಕಾಯಿ ಒಳ್ಳೆಯದು, ಆದ್ರೆ ಅಪ್ಪಿತಪ್ಪಿಯೂ ಸಹ ಇವ್ರು ಬೆಂಡೆಕಾಯಿ ತಿನ್ನಲೇಬಾರದು..!

ladies finger Benefits : ತರಕಾರಿಗಳಲ್ಲಿ ಒಂದಾದ ಬೆಂಡೆಕಾಯಿಯು ಅನೇಕ ಪ್ರಯೋಜನಗಳನ್ನು ಹೊಂದಿದೆ ಎಂದು ನಮಗೆಲ್ಲರಿಗೂ…

ಇನ್ನೇನು ಬೇಸಿಗೆ ಶುರು… ನೀರಿನ ಜತೆ ಇದನ್ನು ಬೆರೆಸಿ ಸಿಂಪಡಿಸಿ ಹಾವುಗಳು ಮನೆ ಬಳಿ ಸುಳಿಯುವುದಿಲ್ಲ! Snake

Snake : ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದ್ದಂತೆ ತಂಪಿನ ವಾತಾವರಣ ಅರಸಿಕೊಂಡು ಹಾವುಗಳು ಜನವಸತಿ ಪ್ರದೇಶಗಳತ್ತ…

ಚಳಿಗಾಲದಲ್ಲಿ ನೀವು ಹೆಚ್ಚು ನಿದ್ರೆ ಮಾಡುವುದು ಏಕೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿ ಉತ್ತರ… Sleep

Sleep : ಚಳಿಗಾಲ ಬಂದಾಗ ಬಹುತೇಕರಿಗೆ ತುಂಬಾ ಆಲಸ್ಯವಾಗುತ್ತದೆ. ಏನೂ ಮಾಡಲೂ ಮನಸಿರುವುದಿಲ್ಲ. ಸೋಮಾರಿತನ ಕಾಡುತ್ತದೆ.…