More

    ನನೆಗುದಿಗೆ ಬಿದ್ದ ಜೆಜೆಎಂ ಕಾಮಗಾರಿ

    ಅಳವಂಡಿ: ಗ್ರಾಮೀಣ ಭಾಗದ ಪ್ರದೇಶದ ಜನರಿಗೆ 24 ಗಂಟೆ ನೀರು ಪೂರೈಸುವ ಯೋಜನೆ ಜೆಜೆಎಂ(ಜಲ ಜೀವನ್ ಮಿಷನ್) ಬಹುತೇಕ ಗ್ರಾಮಗಳಲ್ಲಿ ಜಾರಿಗೆ ತರಲಾಗಿದೆ. ಆದರೆ, ಸಮೀಪದ ಬೆಟಗೇರಿ ಗ್ರಾಮದಲ್ಲಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಹೀಗಾಗಿ ಜನರು ಸಮಸ್ಯೆಯನ್ನು ಅನುಭವಿಸುವಂತಾಗಿದೆ.

    ಜೆಜೆಎಂ ಕಾಮಗಾರಿ ಅವ್ಯವಸ್ಥೆಯ ಆಗರ

    ಕಾಮಗಾರಿ ಪ್ರಾರಂಭವಾಗಿ ವರ್ಷ ಕಳೆದರೂ ಪೂರ್ಣವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಗ್ರಾಮದ ಕೆಲ ಪ್ರದೇಶಗಳಲ್ಲಿ ಕೇವಲ ಪೈಪ್‌ಲೈನ್ ಮಾಡಲಾಗಿದೆ. ನಳಗಳನ್ನು ಅಳವಡಿಸಿಲ್ಲ. ಇನ್ನು ಕೆಲವೆಡೆ ರಸ್ತೆ ಅಗಿದು ಹಾಗೆ ಬಿಡಲಾಗಿದೆ. ಇದರಿಂದ ಜೆಜೆಎಂ ಕಾಮಗಾರಿ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ.

    ಇದನ್ನೂ ಓದಿ: ಮಂಗಳೂರುಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 42.90 ಲಕ್ಷ ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನ ವಶ

    ಬೆಟಗೇರಿ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವಾಗಿದೆ. ಸುಮಾರು 8000 ಜನಸಂಖ್ಯೆಯನ್ನು ಹೊಂದಿದೆ. ಅರ್ಧಂಬರ್ಧ ಕಾಮಗಾರಿಯಿಂದ ಜನರ ಓಡಾಟಕ್ಕೆ ತೊಂದರೆಯಾಗಿದೆ. ಈ ಮೊದಲು ರಸ್ತೆಗಳು ಓಡಾಡು ಯೋಗ್ಯವಾಗಿದ್ದವು. ಜೆಜೆಎಮ್ ಕಾಮಗಾರಿಯಿಂದ ರಸ್ತೆ ವ್ಯವಸ್ಥೆ ಹದಗೆಟ್ಟಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗ್ರಾಮಸ್ಥರ ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts