More

    ಜೆಜೆಎಂ ಅನುಷ್ಠಾನಕ್ಕೆ ಕರೊನಾ ನೆಪ ಬೇಡ

    ಬೆಳಗಾವಿ: ಜಿಲ್ಲೆಯಲ್ಲಿ ಜಲ ಜೀವನ ಮಿಷನ್ (ಜೆಜೆಎಂ) ಯೋಜನೆ ಅನುಷ್ಠಾನಕ್ಕೆ ಕೋವಿಡ್-19 ನೆಪ ಹೇಳಬೇಡಿ. ಅನುದಾನ ರದ್ದಾದರೆ ತಾಪಂ ಇಒ, ಸಂಬಂಧಿಸಿದ ಇಲಾಖೆ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್ ಎಚ್ಚರಿಕೆ ನೀಡಿದರು.

    ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಜರುಗಿದ ಜಲಜೀವನ ಮಿಷನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದಿಂದ ಲಭ್ಯವಿರುವ ಅನುದಾನ ಬಳಸಿಕೊಂಡು ಕಾಮಗಾರಿ
    ಆರಂಭಿಸಬೇಕು. ಪ್ರತಿಯೊಂದು ಗ್ರಾಮದಲ್ಲಿರುವ ವಸತಿ, ಲಭ್ಯವಿರುವ ನೀರಿನ ಪ್ರಮಾಣದ ಸಮೀಕ್ಷೆ ನಡೆಸಿ, ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

    10 ಲಕ್ಷ ರೂ. ಮೀರಬಾರದು: ಪ್ರತಿಯೊಂದು ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಕುಡಿಯಲು ಶುದ್ಧ ನೀರಿನ ವ್ಯವಸ್ಥೆಯಾಗಬೇಕು. ಶೌಚಗೃಹ ಹಾಗೂ ಮುಖ್ಯವಾಗಿ ಕೈ ತೊಳೆದುಕೊಳ್ಳಲು ಪ್ರತ್ಯೇಕ ನೀರಿನ ಕೇಂದ್ರಗಳ ನಿರ್ಮಾಣವಾಗಬೇಕು. ದೂರದ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ನೀರಿನ ವ್ಯವಸ್ಥೆಯಾಗಬೇಕು. ಸಮೀಪದ ಕೊಳವೆ ಬಾವಿಗಳಿಂದ ನೀರು ಪೂರೈಸುವ ಬಗ್ಗೆ ಗ್ರಾಪಂಗಳು ಗಮನ ಹರಿಸಬೇಕು ಎಂದರು. 15ನೇ ಹಣಕಾಸು ಆಯೋಗದ ಶೇ.25 ಅನುದಾನವನ್ನು ಜಲ ಜೀವನ ಮಿಷನ್ ಯೋಜನೆಗೆ ಸಂಬಂಧಿಸಿದ ಕಾರ್ಯಗಳಿಗೆ ಮೀಸಲಿಡಬೇಕು. ಯೋಜನೆಯು ಸಣ್ಣ ಪ್ರಮಾಣದಲ್ಲಿದ್ದು, 10 ಲಕ್ಷ ರೂ. ವೆಚ್ಚ ಮೀರಬಾರದು. ಯೋಜನೆಯಲ್ಲಿ ನೀರು ಸರಬರಾಜು ಮಂಡಳಿ ಮತ್ತು ನರೇಗಾ ಅಧಿಕಾರಿಗಳು ಒಳಗೊಂಡಿರಬೇಕು ಎಂದು ಸಲಹೆ ನೀಡಿದರು.

    ಪ್ರಗತಿ ಹಂತದಲ್ಲಿ 150 ಕಾಮಗಾರಿ: ಜೆಜೆಎಂ ಯೋಜನೆಯಡಿ ಒಟ್ಟು 1000 ಕಾಮಗಾರಿ ಕೈಗೊಳ್ಳಲಾಗಿದೆ. ಅದರಲ್ಲಿ ಚಿಕ್ಕೋಡಿ 660, ಬೆಳಗಾವಿ 340 ಕಾಮಗಾರಿ ಪೈಕಿ 150 ಕಾಮಗಾರಿ ಪ್ರಗತಿ ಹಂತದಲ್ಲಿವೆ. ಇನ್ನುಳಿದ ಕಾಮಗಾರಿ ಟೆಂಡರ್ ಹಂತದಲ್ಲಿವೆ. ಮುಂದಿನ ದಿನಗಳಲ್ಲಿ ಎಲ್ಲ ಕಾಮಗಾರಿ ಆರಂಭಿಸಬೇಕು. ಅಲ್ಲದೆ, ನಿಗದಿತ
    ಸಮಯದೊಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ವಿಷಯದಲ್ಲಿ ಯಾರೇ ನಿರ್ಲಕ್ಷೃ ವಹಿಸಿದರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಜಿಪಂ ಸಿಇಒ ಎಚ್.ವಿ. ದರ್ಶನ, ಉಪ ಕಾರ್ಯದರ್ಶಿ ಎಸ್.ಬಿ. ಮುಳ್ಳಳ್ಳಿ, ಮುಖ್ಯಲೆಕ್ಕಾಧಿಕಾರಿ ಪರುಶರಾಮ ದುಡಗುಂಟಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ವಿ. ಮುನ್ಯಾಳ, ಉಪ ವಿಭಾಗಾಧಿಕಾರಿಗಳಾದ ಯುಕೇಶಕುಮಾರ್, ಅಶೋಕ ತೇಲಿ, ಶಶಿಧರ ಬಗಲಿ ಇದ್ದರು.

    ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಕಡಲೆ ಮತ್ತು ಗೋಧಿ ಬೆಳೆ ಹಾನಿಗೀಡಾಗಿವೆ. ಬೆಳೆಹಾನಿ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಜಿಲ್ಲೆಯ ರೈತ ಕುಟುಂಬಗಳಿಗೆ 831 ಕೋಟಿ ರೂ. ಒದಗಿಸಲಾಗಿದೆ.
    | ಶಿವನಗೌಡ ಪಾಟೀಲ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts