ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿರುವ ಬ್ಯಾಂಡ್ಜೂ ಏರಿಯಾದಲ್ಲಿ ಇಂದು ಮುಂಜಾನೆ ಇಬ್ಬರು ಉಗ್ರರನ್ನು ಸಿಆರ್ಪಿಎಫ್ ಸಿಬ್ಬಂದಿ ಹತ್ಯೆಗೈದಿದ್ದಾರೆ. ಈ ಎನ್ಕೌಂಟರ್ನಲ್ಲಿ ಓರ್ವ ಸಿಆರ್ಪಿಎಫ್ ಸಿಬ್ಬಂದಿಯೂ ಹುತಾತ್ಮರಾಗಿದ್ದಾರೆ.
ಸತ್ತ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ. ಅವರಿಂದ ಅಪಾರ ಪ್ರಮಾಣ್ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಕಾಶ್ಮೀರ ವಲಯದ ಐಜಿಪಿ ಮಾಹಿತಿ ನೀಡಿದ್ದಾರೆ.
ಉಗ್ರರ ವಿರುದ್ಧ ಹೋರಾಟದಲ್ಲಿ ಸಿಆರ್ಪಿಎಫ್ನ ಹೆಡ್ ಕಾನ್ಸ್ಟೇಬಲ್ ಓರ್ವರು ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದರು. ಅವರಿಗೆ ಚಿಕಿತ್ಸೆ ನೀಡಿದರೂ ಫಲಕಾರಿ ಆಗಲಿಲ್ಲ ಎಂದು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಪೊಲೀಸರು, ಸಿಆರ್ಪಿಎಫ್ ಸಿಬ್ಬಂದಿ ಮತ್ತು ಸೇನೆಯ 55 ರಾಷ್ಟ್ರೀಯ ರೈಫಲ್ಸ್ನ ಸಿಬ್ಬಂದಿ ಜಂಟಿಯಾಗಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದರು.
ಸ್ಥಳದಲ್ಲಿ ಅಡಗಿದ್ದ ಉಗ್ರರು ಮೊದಲು ಭದ್ರತಾ ಸಿಬ್ಬಂದಿಯೆಡೆಗೆ ಗುಂಡಿನ ದಾಳಿ ನಡೆಸಿದರು. ಅದಕ್ಕೆ ಪ್ರತಿಯಾಗಿ ರಕ್ಷಣಾ ಸಿಬ್ಬಂದಿಯೂ ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)
ಒಬ್ಬ ವ್ಯಕ್ತಿಗೆ ಕರೊನಾ ಇದೆಯೆಂದು ಆತನ ನೆರೆಹೊರೆಯವರಿಗೆ ತಿಳಿಸಿದ ಡಾಕ್ಟರ್ ಗತಿ ಏನಾಯ್ತು ನೋಡಿ….