ಹೇಡಿಗಳಂತೆ ಗುಂಡು ಹಾರಿಸಿದ ಉಗ್ರರನ್ನು ಕೊಂದ ಸಿಆರ್​ಪಿಎಫ್​

Pulwama 23 June 20
Published on

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿರುವ ಬ್ಯಾಂಡ್‌ಜೂ ಏರಿಯಾದಲ್ಲಿ ಇಂದು ಮುಂಜಾನೆ ಇಬ್ಬರು ಉಗ್ರರನ್ನು ಸಿಆರ್​ಪಿಎಫ್​ ಸಿಬ್ಬಂದಿ ಹತ್ಯೆಗೈದಿದ್ದಾರೆ. ಈ ಎನ್​ಕೌಂಟರ್​​ನಲ್ಲಿ ಓರ್ವ ಸಿಆರ್​ಪಿಎಫ್​ ಸಿಬ್ಬಂದಿಯೂ ಹುತಾತ್ಮರಾಗಿದ್ದಾರೆ.

ಸತ್ತ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ. ಅವರಿಂದ ಅಪಾರ ಪ್ರಮಾಣ್ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಕಾಶ್ಮೀರ ವಲಯದ ಐಜಿಪಿ ಮಾಹಿತಿ ನೀಡಿದ್ದಾರೆ.

ಉಗ್ರರ ವಿರುದ್ಧ ಹೋರಾಟದಲ್ಲಿ ಸಿಆರ್​ಪಿಎಫ್​ನ ಹೆಡ್​ ಕಾನ್ಸ್ಟೇಬಲ್​ ಓರ್ವರು ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದರು. ಅವರಿಗೆ ಚಿಕಿತ್ಸೆ ನೀಡಿದರೂ ಫಲಕಾರಿ ಆಗಲಿಲ್ಲ ಎಂದು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಪೊಲೀಸರು, ಸಿಆರ್​ಪಿಎಫ್​ ಸಿಬ್ಬಂದಿ ಮತ್ತು ಸೇನೆಯ 55 ರಾಷ್ಟ್ರೀಯ ರೈಫಲ್ಸ್​ನ ಸಿಬ್ಬಂದಿ ಜಂಟಿಯಾಗಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದರು.

ಸ್ಥಳದಲ್ಲಿ ಅಡಗಿದ್ದ ಉಗ್ರರು ಮೊದಲು ಭದ್ರತಾ ಸಿಬ್ಬಂದಿಯೆಡೆಗೆ ಗುಂಡಿನ ದಾಳಿ ನಡೆಸಿದರು. ಅದಕ್ಕೆ ಪ್ರತಿಯಾಗಿ ರಕ್ಷಣಾ ಸಿಬ್ಬಂದಿಯೂ ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net