More

    ಲೋಕಸಭೆ ಚುನಾವಣೆ ಬಳಿಕ ಜಮ್ಮು ಕಾಶ್ಮೀರದಲ್ಲಿ ಚುನಾವಣೆ: ಕಾರಣ ಹೀಗಿದೆ ನೋಡಿ..!

    ನವದೆಹಲಿ: ಲೋಕಸಭೆ ಚುನಾವಣೆ 2024 ಕಾವು ಜೋರಾಗಿದೆ. ಭಾರತದ ಚುನಾವಣಾ ಆಯೋಗವು ಶನಿವಾರ ಲೋಕಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದೆ. ಆದರೆ ಜಮ್ಮು ಮತ್ತು ಕಾಶ್ಮೀರ ಚುನಾವಣೆ ಘೋಷಣೆಯಾಗಿಲ್ಲ.

    ಇದನ್ನೂ ಓದಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಕಾಂಗ್ರೆಸ್​ಗೆ ಭ್ರಷ್ಟಾಚಾರವೇ ಆಕ್ಸಿಜನ್​: ಮೋದಿ 

    ಇದಕ್ಕೆ ಸ್ಪಷ್ಟನೆ ನೀಡಿರುವ ಚುನಾವಣಾ ಆಯೋಗ ಲೋಕಸಭೆ ಚುನಾವಣೆಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಭದ್ರತಾ ದೃಷ್ಟಿಯಿಂದ ಏಕಕಾಲದಲ್ಲಿ ಚುನಾವಣೆ ನಡೆಸುತ್ತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

    ಲೋಕಸಭೆ ಚುನಾವಣೆ ಬಳಿಕ ಜಮ್ಮು ಕಾಶ್ಮೀರದಲ್ಲಿ ಚುನಾವಣೆ: ಕಾರಣ ಹೀಗಿದೆ ನೋಡಿ..!

    ಕಣಿವೆ ರಾಜ್ಯದಲ್ಲಿ ಭದ್ರತಾ ವಿಚಾರದಲ್ಲಿ ಯಾವುದೇ ಆತಂಕವಿಲ್ಲ. ಆದರೆ ಪ್ರತಿ ಅಭ್ಯರ್ಥಿಗಳಿಗೆ ಭದ್ರತೆ ಅವಶ್ಯಕತೆ ಇದೆ. ಪ್ರತಿ ನಾಗರೀಕರಿಗೂ ಭದ್ರತೆಯ ಅವಶ್ಯತೆ ಇದೆ. ಹೀಗಾಗಿ ಜೊತೆ ಜೊತೆಯಾಗಿ ನಡೆಸುವುದು ಸವಾಲಾಗಲಿದೆ. ಹೀಗಾಗಿ ಲೋಕಸಭಾ ಚುನಾವಣೆ ಬಳಿಕ ಕಣಿವೆ ರಾಜ್ಯದ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ ಪುನಾರಚನೆ ಕಾಯ್ದೆಯು 2019ರಲ್ಲಿ ಮಂಡನೆಯಾಯಿತು. ಇದರಲ್ಲಿ 107 ಕ್ಷೇತ್ರಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಇದರಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ 24 ಕ್ಷೇತ್ರಗಳು ಒಳಗೊಂಡಿವೆ. ಕ್ಷೇತ್ರ ಮರುವಿಂಗಡನೆ ಆಯೋಗದ ಪ್ರವೇಶದಿಂದ ಕೆಲವೊಂದು ಕ್ಷೇತ್ರಗಳು ಬದಲಾದವು. ಆದರೆ ರಾಜ್ಯದ ಪುನಾರಚನೆ ಮತ್ತು ಕ್ಷೇತ್ರ ಮರುವಿಂಗಡನೆ ನಡುವೆ ಹೊಂದಾಣಿಕೆಯಾಗಲಿಲ್ಲ. ಇದು 2023ರ ಡಿಸೆಂಬರ್‌ನಲ್ಲಿ ನಡೆಯಿತು. ಹೀಗಾಗಿ ನಮ್ಮ ಕೆಲಸ ಆರಂಭವಾಗಿದ್ದೇ 2023ರ ಡಿಸೆಂಬರ್‌ನಿಂದ ಎಂದು ಅವರು ತಿಳಿಸಿದರು.

    ಲೋಕಸಭೆ ಚುನಾವಣೆ ಬಳಿಕ ಜಮ್ಮು ಕಾಶ್ಮೀರದಲ್ಲಿ ಚುನಾವಣೆ: ಕಾರಣ ಹೀಗಿದೆ ನೋಡಿ..!

    ಸುಪ್ರೀಂ ಕೋರ್ಟ್ ಆದೇಶದಂತೆ ಸೆಪ್ಟೆಂಬರ್ 30ರೊಳಗೆ ಜಮ್ಮು ಮತ್ತು ಕಾಶ್ಮೀರದ ಚುನಾವಣೆ ನಡೆಯಲಿದೆ. ಇದಕ್ಕಾಗಿ ಚುನಾವಣಾ ಆಯೋಗ ತಯಾರಿ ನಡೆಸುತ್ತಿದೆ. 2014ರಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ನಡೆದಿತ್ತು. ಪಿಡಿಪಿ ಹಾಗೂ ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಆದರೆ 2018ರಲ್ಲಿ ಬಿಜೆಪಿ ಬೆಂಬಲ ವಾಪಸ್ ಪಡೆದಿತ್ತು. ಹೀಗಾಗಿ ರಾಷ್ಟ್ರಪತಿ ಆಳ್ವಿಕೆ ಜಾರಿ ಬಂದಿತ್ತು. ಕಳೆದ 6 ವರ್ಷಗಳಿಂದ ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಇದೀಗ ಚುನಾವಣೆ ನಡೆಯಲಿದೆ.

    ಲೋಕಸಭಾ ಚುನಾವಣೆಯ ಜೊತೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಸುವಂತೆ ಅಲ್ಲಿನ ಎಲ್ಲ ರಾಜಕೀಯ ಪಕ್ಷಗಳು ಒತ್ತಾಯಿಸಿವೆ. ಆದರೆ ಹಾಗೆ ಚುನಾವಣೆ ನಡೆಸಲು ಸಾಧ್ಯವಿಲ್ಲ. ಪ್ರತಿ ವಿಧಾನಸಭಾ ಕ್ಷೇತ್ರವು 10ರಿಂದ 12 ಅಭ್ಯರ್ಥಿಗಳನ್ನು ಹೊಂದಿರುತ್ತದೆ. ಅಂದರೆ ಚುನಾವಣಾ ಕಣದಲ್ಲಿ ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಇರುತ್ತಾರೆ. ಪ್ರತಿ ಅಭ್ಯರ್ಥಿಗೂ ಭದ್ರತೆ ಕೊಡಬೇಕಾಗುವುದು ನಮ್ಮ ಕರ್ತವ್ಯ. ಲೋಕಸಭಾ ಚುನಾವಣೆ ನಂತರವೇ ಇದು ಸಾಧ್ಯ ಎಂದು ಹೇಳಿದರು.

    18ನೇ ಲೋಕಸಭೆಗೆ ಏಪ್ರಿಲ್‌ 19 ರಿಂದ ಜೂನ್‌ 1 ರವರೆಗೆ ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

    ಬೆಂಗ್ಳೂರಿನ ಐಪಿಎಲ್‌ ಪಂದ್ಯ ಸ್ಥಳಾಂತರ ಮಾಡಿದ್ರೆ ಕರ್ನಾಟಕ ಬಂದ್!: ಎಚ್ಚರಿಕೆ ನೀಡಿದ ವಾಟಾಳ್ ​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts