VIDEO| ಜೈ ಶ್ರೀರಾಮ್​ ಎಂದು ಬರೆದಿದ್ದಕ್ಕೆ ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಿದ ಶಿಕ್ಷಕ

jai shri ram
Published on

ಶ್ರೀನಗರ: ಉತ್ತರಪ್ರದೇಶದ ಮುಜಾಫರ್​ನಗರದಲ್ಲಿ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿಸಿದ ಪ್ರಕರಣ ಮಾಸುವ ಮುನ್ನವೇ ಅದೇ ರಿತಿಯ ಘಟನೆಯೊಂದು ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಜಿಲ್ಲೆಯ ಬನ್ನಿ ಗ್ರಾಮದ ಶಾಲೆಯಲ್ಲಿ ಘಟನೆ ನಡೆದಿದ್ದು, ಬೋರ್ಡ್​​ ಮೇಲೆ ಜೈ ಶ್ರೀರಾಮ್​ ಎಂದು ವಿದ್ಯಾರ್ಥಿ ಬರೆದಿದ್ದಕ್ಕೆ ಕುಪಿತಗೊಂಡ ಶಿಕ್ಷಕ ಹಾಗೂ ಪ್ರಾಂಶುಪಾಲ ಆತನನ್ನು ಅಮಾನುಷವಾಗಿ ಥಳಿಸಿದ್ದಾರೆ. ಗಾಯಗೊಂಡಿರುವ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣದ ಹಿನ್ನಲೆ

ನೀರಜ್​ ಕುಮಾರ್​ ಎಂಬ ವಿದ್ಯಾರ್ಥಿಯು ಕ್ಲಾಸ್​ ರೂಮಿನ ಬೋರ್ಡ್​ ಮೇಲೆ ಜೈ ಶ್ರೀರಾಮ್​ ಎಂದು ಬರೆದಿದ್ದಾನೆ. ಇದನ್ನು ಕಂಡು ಕುಪಿತಗೊಂಡ ಶಿಕ್ಷಕ ಹಫೀಜ್​ ಹಾಗೂ ಪ್ರಾಂಶುಪಾಲ ಫಾರೂಕ್​ ಅಹ್ಮದ್​​ ವಿದ್ಯಾರ್ಥಿಯನ್ನು ಬೂಟ್​ ಕಾಲಿನಿಂದ ಒದ್ದು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ವಿದ್ಯಾರ್ಥಿಯ ಹೊಟ್ಡೆ ಭಾಗಕ್ಕೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ.

ವಿದ್ಯಾರ್ಥಿ ಮೇಲಿನ ಹಲ್ಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಜಿಲ್ಲಾಡಳಿತ ವಿಭಾಗೀಯ ಮ್ಯಾಜಿಸ್ಟ್ರೇಟ್, ಉಪ ಮುಖ್ಯ ಶಿಕ್ಷಣ ಅಧಿಕಾರಿ, ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರನ್ನು ಒಳಗೊಂಡ ಸಮಿತಿಯನ್ನು ನೇಮಿಸಿ ತನಿಖೆ ನಡೆಸುವಂತೆ ಆದೇಶ ಹೊರಡಿಸಿದೆ. ವಿದ್ಯಾರ್ಥಿಯ ಮೇಲಿನ ಹಲ್ಲೆ ಖಂಡಿಸಿ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರೋಪಿತರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net