21 C
Bengaluru
Wednesday, January 22, 2020

ಜ್ಞಾನ ಸಂಸತ್ ಅಧಿವೇಶನ ನಾಳೆ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ವಿಜಯವಾಣಿ ಸುದ್ದಿಜಾಲ ಧಾರವಾಡ

ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್​ನಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಡಿ. 14ರಂದು ಸಂಜೆ 4ಕ್ಕೆ ಜ್ಞಾನ ಸಂಸತ್ ಅಧಿವೇಶನ ಆಯೋಜಿಸಲಾಗಿದೆ ಎಂದು ಫೌಂಡೇಷನ್ ಸಂಸ್ಥಾಪಕ ಮಲ್ಲಿಕಾರ್ಜುನ ರಡ್ಡೇರ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣವರ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಕವಿವಿ ಪ್ರಭಾರ ಕುಲಪತಿ ಡಾ. ಎ.ಎಸ್. ಶಿರಾಳಶೆಟ್ಟಿ, ಕುಲಸಚಿವರಾದ ಡಾ. ಸಿ.ಬಿ. ಹೊನ್ನು ಸಿದ್ಧಾರ್ಥ, ಪ್ರೊ. ಎನ್.ಎಂ. ಸಾಲಿ, ಮನಃಶಾಸ್ತ್ರಜ್ಞ ಡಾ. ಆನಂದ ಪಾಂಡುರಂಗಿ, ಇತರರು ಪಾಲ್ಗೊಳ್ಳುವರು ಎಂದರು.

ಆಕಾಂಕ್ಷೆಗಳ ಅನ್ವೇಷಣೆ ಧ್ಯೇಯವಾಕ್ಯದೊಂದಿಗೆ ನಡೆಯುವ ಅಧಿವೇಶನ ಇದಾಗಿದೆ. ನೀವು ಏನಾಗಬೇಕಂತೀರಿ, ಆಗಿ ಏನು ಮಾಡಬೇಕಂತೀರಿ? ಅದಕ್ಕೆ ನಿಮಗೇನು ಸಹಾಯ ಬೇಕು? ಎಂಬ ಪ್ರಶ್ನೆ, ಪರಿಕಲ್ಪನೆಯೊಂದಿಗೆ ವಿದ್ಯಾರ್ಥಿಗಳ ಬಳಿಗೆ ಹೋಗಿ ಅವರ ಕನಸು ತಿಳಿದು, ಅವಕಾಶ ಕಲ್ಪಿಸಿಕೊಡುವ ಉದ್ದೇಶದ ಅನ್ವೇಷಣೆ ಇದಾಗಿದೆ. ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ಮಹಾನ್ ಸಾಧಕರ ಮುಂದೆ ಮಂಡಿಸುವ ಅವಕಾಶ ಕೊಟ್ಟು, ನನಸು ಮಾಡಿಕೊಳ್ಳಲು ಪ್ರೋತ್ಸಾಹ ನೀಡಲಾಗುವುದು ಎಂದರು.

ಯಾವುದೇ ರೀತಿಯ ಅನುದಾನ, ದೇಣಿಗೆ, ಶುಲ್ಕ ಪಡೆಯದೇ 85 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬೋಧನೆ ಪ್ರೇರಣೆಯ ಜತೆಗೆ ಉಚಿತ ತರಬೇತಿ ನೀಡಿ ಶಿಕ್ಷಣ ಕ್ಷೇತ್ರದಲ್ಲಿ ಸಾರ್ಥಕ ಸೇವೆ ಮಾಡುವ ಉದ್ದೇಶದಿಂದ ವರದಿಶ್ರೀ ಫೌಂಡೇಷನ್ ಕಾರ್ಯನಿರ್ವಹಿಸುತ್ತದೆ.

ಶಾಲೆ, ಕಾಲೇಜು, ಪದವಿ, ಸ್ನಾತಕೋತ್ತರ, ಮಹಾವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿರುವ 28 ವರ್ಷದೊಳಗಿನವರನ್ನು ಜ್ಞಾನ ಸಂಸತ್ತಿಗೆ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾ ಮಾರ್ಗದಲ್ಲಿ ಆಯ್ಕೆ ಮಾಡುವುದೇ ಜ್ಞಾನ ಸಂಸತ್ ಆಗಿದೆ.

ಖಿನ್ನತೆ, ನೆನಪಿನ ಶಕ್ತಿಯ ಕೊರತೆ ಮುಂತಾದ ಸಮಸ್ಯೆಗಳಿಂದ ಮಕ್ಕಳನ್ನು ಹೊರತಂದು ತಮ್ಮ ಬಗ್ಗೆ ತಮಗೆ ನಂಬಿಕೆ ಬರುವಂತೆ ಮಾಡಿ ಹೊಸ ಚೈತನ್ಯ ಮೂಡಿಸಿ ಸಾಧನೆಗೆ ದೈಹಿಕ- ಮಾನಸಿಕವಾಗಿ ಪ್ರಬಲರಾಗಿಸುವ, ಸಂಬಂಧಗಳ ನಿರ್ವಹಣೆ, ಮಾತಿನ ಕೌಶಲ, ಸಾರ್ವಜನಿಕ ಸ್ಥಳಗಳಲ್ಲಿ ವರ್ತನೆ, ಸಾಧಕರ ಮನಸ್ಥಿತಿಗೆ ಪೂರಕವಾದ ಯೋಚನೆ- ಯೋಜನೆ, ಆಹಾರ- ವಿಹಾರದ ಬಗ್ಗೆ ತಿಳಿಸಿಕೊಟ್ಟು ಸದೃಢಗೊಳಿಸುವ ಕೆಲಸವನ್ನು ಸಂಸ್ಥೆ ಮಾಡುತ್ತ ಬಂದಿದೆ.

ಸಾಧಕರೊಂದಿಗೆ ಸಭೆ, ವಿಶ್ವವಿದ್ಯಾಲಯಗಳ ವೀಕ್ಷಣೆ, ವಿಮಾನಯಾನ, ಕೃಷಿ ಪದ್ಧತಿ ಕ್ಷೇತ್ರಗಳ ಅಧ್ಯಯನ ಸೇರಿ ಅವರವರ ಕನಸುಗಳನ್ನು ದೇಶದ ವಿವಿಧ ರಂಗದ ಸಾಧಕರ ಮುಂದೆ ಜ್ಞಾನ ಸಂಸತ್ ಮೂಲಕ ಮಂಡಿಸಿ ಮುಂದಿನ ಸಾಧನೆಗೆ ಅಗತ್ಯ ಸಹಾಯ ಮಾಡಲಾಗುತ್ತದೆ ಎಂದು ವಿವರಿಸಿದರು. ಲಿಂಗರಾಜ ನಿಡುವಣಿ, ಕೆ.ಎಸ್. ಶಿರಸಂಗಿ, ಸಿದ್ದು ರಡ್ಡೇರ ಇದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...