More

    VIDEO| ಮಂಡಿ ಹೌಸ್​ನಿಂದ ರಾಷ್ಟ್ರಪತಿ ಭವನದತ್ತ ಹೊರಟ ಜೆಎನ್​ಯು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

    ನವದೆಹಲಿ: ಮಂಡಿ ಹೌಸ್​ನಲ್ಲಿ ಪ್ರತಿಭಟನೆ ನಡೆಸಿ, ರಾಷ್ಟ್ರಭವನದತ್ತ ಹೊರಟ ಜೆಎನ್​ಯು ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.

    ಮಾರ್ಗ ಮಧ್ಯದಲ್ಲಿ ಪೊಲೀಸರು ಕಾರು ಮತ್ತು ಬ್ಯಾರಿಕೇಡ್​ಗಳನ್ನು ಅಡ್ಡ ಹಾಕಿ ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಕೆಲ ವಿದ್ಯಾರ್ಥಿಗಳು ಬ್ಯಾರಿಕೇಡ್​ನ್ನು ಹತ್ತಿ ಮುನ್ನುಗ್ಗಲು ಯತ್ನಿಸಿದರು. ಪ್ರತಿಭಟನಾ ನಿರತ ಕೆಲ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಬಸ್​ನಲ್ಲಿ ಕರೆದೊಯ್ಯಲಾಯಿತು.

    ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ನಾಗರಿಕರು ಮಂಡಿ ಹೌಸ್​ ಮುಂದೆ ಮಧ್ಯಾಹ್ನ ಪ್ರತಿಭಟನೆ ಆರಂಭಿಸಿದ್ದರು. ನಂತರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ನಡೆದು, ಮನವಿ ಸಲ್ಲಿಸಲು ಪ್ರತಿಭಟನಾಕಾರರು ಯೋಚಿಸಿದ್ದರು.

    ಈ ವೇಳೆ ಭಾನುವಾರ ನಡೆದ ಜೆಎನ್​ಯು ವಿವಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಹಾಗೂ ಉಪ ಕುಲಪತಿ ರಾಜೀನಾಮೆಗೆ ಒತ್ತಾಯಿಸಲು ತೀರ್ಮಾನಿಸಿದ್ದರು.

    ಆದರೆ ನಂತರ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ಐಷೆ ಘೋಷ್​ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರನ್ನೂ ಭೇಟಿ ಮಾಡಲು ತೀರ್ಮಾನಿಸಿದರು. ಪ್ರತಿಭಟನೆಯಲ್ಲಿ ಎಡಪಂಥೀಯ ಮುಖ್ಯಸ್ಥ ಸೀತಾರಾಂ ಯೆಚೂರಿ ಹಾಜರಿದ್ದರು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts