Champions Trophy ವಿಚಾರವಾಗಿ ಬಿಸಿಸಿಐ ಯಾವತ್ತಿದ್ದರೂ... ಅಚ್ಚರಿಯ ಹೇಳಿಕೆ ನೀಡಿದ ಟೀಮ್​ ಇಂಡಿಯಾ ಮಾಜಿ ಆಟಗಾರ

Champions Trophy
Published on

ನವದೆಹಲಿ: 2025ರ ಫೆಬ್ರವರಿ-ಮಾರ್ಚ್​ ತಿಂಗಳಲ್ಲಿ ನಡೆಯಲಿರುವ ಚಾಂಪಿಯನ್ಸ್​ ಟ್ರೋಫಿ (Champions Trophy) ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದು, ಪ್ರಮುಖವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಕಿತ್ತಾಟದಿಂದಲೇ ಹೆಚ್ಚು ಸದ್ದು ಮಾಡುತ್ತಿದೆ. ಉಭಯ ದೇಶಗಳ ಕ್ರಿಕೆಟ್​ ಮಂಡಳಿ ನಡುವಿನ ಹಗ್ಗಜಗ್ಗಾಟದಿಂದಲೇ ಟೂರ್ನಿಯ ವೇಳಾಪಟ್ಟಿ ಈವರೆಗೂ ಪ್ರಕಟಗೊಂಡಿಲ್ಲ. ಈ ಸಂಬಂಧ ಐಸಿಸಿ ಸರಣಿ ಸಭೆಗಳನ್ನು ನಡೆಸುತ್ತಿದ್ದು, ಉಭಯ ದೇಶಗಳ ನಡುವಿನ ಕಿತ್ತಾಟ ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದೆ.

ಇನ್ನೂ ಟೂರ್ನಿಗೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದು, ಚಾಂಪಿಯನ್ಸ್​ ಟ್ರೋಫಿ (Champions Trophy) ವಿಚಾರವಾಗಿ ಬಿಸಿಸಿಐ ತೆಗೆದುಕೊಂಡಿರುವ ನಿರ್ಧಾರವನ್ನು ಹಾಡಿ ಹೊಗಳಿದ್ದಾರೆ.

ಈ ಬಗ್ಗೆ ಎಎನ್​ಐಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಯೂಸುಫ್​ ಪಠಾಣ್​ (Yusuf Pathan), ಬಿಸಿಸಿಐ ಯಾವತ್ತಿದ್ದರೂ ಆಟಗಾರರು ಹಾಗೂ ಅವರ ಕುಟುಂಬದವರ ಹಿತಾಸಕ್ತಿಗಳ ಬಗ್ಗೆ ಹೆಚ್ಚು ಯೋಚಿಸುತ್ತದೆ. ಬಿಸಿಸಿಐ ಏನು ಮಾಡಿದರೂ ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುತ್ತದೆ. ಬಿಸಿಸಿಐ ಏನೇ ನಿರ್ಧಾರ ತೆಗೆದುಕೊಂಡರು ಅದು ದೇಶದ ಪರವಾಗಿರುತ್ತೆ ಎಂದು ಮಾಜಿ ಕ್ರಿಕೆಟಿಗ ಯೂಸುಫ್​ ಪಠಾಣ್​ ಹೇಳಿದ್ದಾರೆ.

ಆರ್ಥಿಕ ಸಂಕಷ್ಟದ ಭಯ

ಭಾರತ ತಂಡ (Team India) ಚಾಂಪಿಯನ್ಸ್ ಟ್ರೋಫಿ (Champions Trophy) ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗಲಿದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದ್ದು, ಕ್ರಿಕೆಟ್​ನಲ್ಲಿ ಟೀಮ್​ ಇಂಡಿಯಾಗೆ (Team India) ಇರುವ ಕ್ರೇಜ್​ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್​ ಇಂಡಿಯಾ ಪಾಕಿಸ್ತಾನಕ್ಕೆ ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್​ ಮೇಲೆ ಇರುವ ಕಳಂಕವೂ ದೂರವಾಗಲಿದೆ ಎಂಬ ನಂಬಿಕೆಯಲ್ಲಿ ಅಲ್ಲಿನ ಕ್ರಿಕೆಟ್​ ಮಂಡಳಿ ಹಾಗೂ ಸರ್ಕಾರ ಕಾದು ಕುಳಿತಿದೆ. ಅಲ್ಲದೇ, ಉಭಯ ದೇಶಗಳ ನಡುವಿನ ಸಂಬಂಧವೂ ಕೂಡ ಕ್ರಿಕೆಟ್​ ಮೂಲಕ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ. ಆದರೆ, ಪಿಸಿಬಿ (PCB) ನಿರೀಕ್ಷೆಗೆ ಬಿಸಿಸಿಐ (BCCI) ಆಘಾತ ನೀಡಿದ್ದು, ಯಾವುದೇ ಕಾರಣಕ್ಕೂ ಪಾಕಿಸ್ತಾನಕ್ಕೆ ಬರುವುದಿಲ್ಲ ಎಂದು ಕಡ್ಡಿ ಮರಿದಂತೆ ಹೇಳಿದೆ.

ಇದಲ್ಲದೆ ಭದ್ರತೆಯ ಕಾರಣದಿಂದಾಗಿ ಭಾರತದ ಪಂದ್ಯಗಳನ್ನು ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಸುವುದಾಗಿ ತಿಳಿಸಿದ್ದು, ಇದಕ್ಕಾಗಿ ಕ್ರೀಡಾಂಗಣದ ಪಕ್ಕದಲ್ಲಿರುವ ಐದು ಎಕರೆ ಜಮೀನನ್ನು ಸ್ವಾದೀನಪಡಿಸಿಕೊಳ್ಳಲಾಗಿದ್ದು, ಭಾರತದ ಆಟಗಾರರು ಹಾಗೂ ಸಿಬ್ಬಂದಿ ಉಳಿದುಕೊಳ್ಳಲು 5 ಸ್ಟಾರ್​ ಹೋಟೆಲ್​ ನಿರ್ಮಿಸುತ್ತಿರುವುದಾಗಿ ಪಿಸಿಬಿ ತಿಳಿಸಿದೆ. ಇದಲ್ಲದೆ ಭಾರತ ತಂಡ ಪಾಕಿಸ್ತಾನಕ್ಕೆ ಬರುವುದರಿಂದ ಉಭಯ ದೇಶಗಳ ನಡುವಿನ ಸಂಬಂಧ ಸ್ವಲ್ಪಮಟ್ಟಿಗೆ ಸರಿಹೋಗಬಹುದು ಎಂದು ಪಿಸಿಬಿ ಆಶಿಸಿದೆ. ಆದರೆ, ಪಾಕಿಸ್ತಾನ ಆಸೆಗೆ ಭಾರತ ತಣ್ಣೀರು ಎರಚಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ಹಂತ ತಲುಪಲಿದೆ ಎಂದು ಕಾದು ನೋಡಬೇಕಿದೆ.

https://www.vijayavani.net/nothing-special-mitchell-starcs-blunt-verdict-on-yashasvi-jaiswals-royal-duck-in-pink-ball-test

https://www.vijayavani.net/masood-azhars-speech-exposes-paks-duplicity-indias-stern-response

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net