30ರಂದು ಮಿಲಾಗ್ರಿಸ್‌ನಲ್ಲಿ ಉದ್ಯೋಗ ಮೇಳ

Mng_Milagris
Published on

ಮಂಗಳೂರು: ಹಂಪನಕಟ್ಟೆಯ ಮಿಲಾಗ್ರಿಸ್ ಕಾಲೇಜಿನಲ್ಲಿ ಜುಲೈ30 ರಂದು ಬೆಳಗ್ಗೆ 9ರಿಂದ ಸಂಜೆ 3ರ ತನಕ ಉದ್ಯೋಗ ಮೇಳ ನಡೆಯಲಿದೆ. ಯಾವುದೇ ನೋಂದಣಿ ಶುಲ್ಕ ಇಲ್ಲದೆ ಅಭ್ಯರ್ಥಿಗಳು ಭಾಗವಹಿಸಲು ಅವಕಾಶವಿದೆ.

ಸುಮಾರು 60 ಕಂಪನಿಗಳು ಭಾಗವಹಿಸುತ್ತಿದ್ದು, 2500ರಷ್ಟು ಉದ್ಯೋಗ ಒದಗಿಸಲಿದೆ. ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ಐಟಿಐ, ಡಿಪ್ಲೊಮಾ, ಹೋಟೆಲ್ ಮ್ಯಾನೇಜ್‌ಮೆಂಟ್ ಶಿಕ್ಷಣ ಪಡೆದ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಡಾ. ಮೈಕೆಲ್ ಸಾಂತುಮಯೋರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net