ಜೀವನೋಪಾಯಕ್ಕೆ ಕೌಶಲ ತರಬೇತಿ ಮುಖ್ಯ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಮತ

Job Fair in University Mandya

ಮಂಡ್ಯ: ಜೀವನೋಪಾಯಕ್ಕೆ ಕೌಶಲ ತರಬೇತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ನಗರದ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಡಳಿತ, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮಂಡ್ಯ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.
ಕೌಶಲ ತರಬೇತಿ ಪಡೆದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬಹುದು. ಇದರಿಂದ ಬದುಕು ನಿರ್ವಹಣೆಗೆ ಅನುಕೂಲಕರವಾಗಲಿದೆ. ಉದ್ಯೋಗ ದೊರಕುವ ಆತ್ಮವಿಶ್ವಾಸ ಹೆಚ್ಚಾಗಲಿದೆ. ಇಂತಹ ತರಬೇತಿಯಿಂದ ಸಂದರ್ಶನಗಳನ್ನು ಯಾವ ರೀತಿ ಎದುರಿಸುವುದೆಂದು ತಿಳಿಯಲಿದೆ. ಕಂಪನಿಯಲ್ಲಿ ಉದ್ಯೋಗ ಪಡೆಯಲು ಸಹಕಾರಿಯಾಗಲಿದೆ. ಜತೆಗೆ ತಾಂತ್ರಿಕವಾಗಿ ಕೆಲಸ ನಿರ್ವಹಿಸಲು ಸುಲಭವಾಗಲಿದೆ ಎಂದು ತಿಳಿಸಿದರು.
ಸರ್ಕಾರ, ಖಾಸಗಿ ಸಂಸ್ಥೆಗಳು ಹಾಗೂ ಮಠಗಳು ಶಿಕ್ಷಣವನ್ನು ನೀಡುತ್ತಿವೆ. ವಿದ್ಯೆಯ ಜತೆಗೆ ಬುದ್ದಿ ಮತ್ತು ಜ್ಞಾನವನ್ನು ಬೆಳೆಸಿಕೊಂಡು ಸ್ವಯಂ ಉದ್ಯೋಗವನ್ನು ಮಾಡಲು ಆಸಕ್ತಿ ತೋರಬೇಕು. ಇದಕ್ಕಾಗಿ ಸರ್ಕಾರದಲ್ಲಿ ಅನೇಕ ಸೌಲಭ್ಯಗಳನ್ನು ದೊರೆಯುತ್ತಿದ್ದು, ಅದನ್ನು ಸದುಪಯೋಗಪಡೆಸಿಕೊಳ್ಳಬೇಕು. ಡಿಸೆಂಬರ್ ಮಾಹೆಯ ಒಳಗೆ ಏಳು ತಾಲೂಕಿನ ನಿರುದ್ಯೋಗಿಗಳಿಗೆ ಬೃಹತ್ ಉದ್ಯೋಗ ಮೇಳ ಏರ್ಪಡಿಸಲು ಉದ್ದೇಶಿಲಾಗಿದೆ. ಇಂತಹ ಮೇಳದಿಂದ ಯಾರಿಗಾದರೂ ಉದ್ಯೋಗ ದೊರತಲಿ ಆ ಕಾರ್ಯಕ್ರಮ ಸಫಲತೆಯನ್ನು ಕಾಣಲಿದೆ ಎಂದರು.
ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಂಡ್ಯ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ಶಿವಚಿತ್ತಪ್ಪ ಇತರರಿದ್ದರು.
ಖಾದಿ ಉತ್ಸವಕ್ಕೆ ಚಾಲನೆ: ವಿವಿ ಆವರಣದಲ್ಲಿ ಫೆ.21ರವರೆಗೆ ನಡೆಯಲಿರುವ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮಾದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟದ ಖಾದಿ ಉತ್ಸವಕ್ಕೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು. ನಂತರ ಖಾದಿ ಮಳಿಗೆಗೆ ಭೇಟಿ ನೀಡಿದರು. ಶಾಸಕ ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಇತರರಿದ್ದರು.

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…