ಆರ್​ಸಿಬಿಗೆ ಬಂತು ಆನೆ ಬಲ; ಬದಲಿ ಆಟಗಾರನಾಗಿ ಮಾರಕ ವೇಗಿ ಎಂಟ್ರಿ

ಬೆಂಗಳೂರು: ಮಾರ್ಚ್​ 22ರಂದು ಪ್ರಾರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್​ ಪ್ರೀಮಿಯರ್​ ಲೀಗ್​ಗೆ​ (IPL) ಈಗಘಾಲೇ ಸಿದ್ಧತೆಗಳು ಭರದಿಂದ ಸಾಗಿದ್ದು, ಉದ್ಘಾಟನಾ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ಸೆಣಸಾಡಲಿವೆ. ಐಪಿಎಲ್​ ಆರಂಭಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಕೆಲ ಸ್ಟಾರ್ ಆಟಗಾರರು ಗಾಯದ ಸಮಸ್ಯೆ, ವೈಯಕ್ತಿಕ ಕಾರಣಗಳನ್ನು ನೀಡಿ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಇವರ ಜಾಗಕ್ಕೆ ಬದಲಿ ಆಟಗಾರರು ಪ್ರವೇಶಿಸುತ್ತಿದ್ದಾರೆ. ಈ ಸಮಸ್ಯೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕೂಡ ತಲೆದೂರಿದೆ. … Continue reading ಆರ್​ಸಿಬಿಗೆ ಬಂತು ಆನೆ ಬಲ; ಬದಲಿ ಆಟಗಾರನಾಗಿ ಮಾರಕ ವೇಗಿ ಎಂಟ್ರಿ