More

    ಮಾಜಿ ಐಎಎಸ್ ಅಧಿಕಾರಿ ಪತ್ನಿ ಕಾಂಗ್ರೆಸ್‌ಗೆ ಸೇರ್ಪಡೆ

    ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಂ ಪತ್ನಿ ವಾಣಿ ಶಿವರಾಂ, ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದಂತೆ ಮಾಜಿ ಕಾರ್ಪೊರೇಟರ್ ರೂಪಾ ಲಿಂಗೇಶ್, ಗೋಪಿಕೃಷ್ಣ ಕಾಂಗ್ರೆಸ್ ಸೇರ್ಪಡೆಗೊಂಡರು.

    ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಿವರಾಂ ಐಎಎಸ್ ಅಧಿಕಾರಿಯಾಗಿ  ಪರಿಚಿತರಾಗಿದ್ದಾರೆ. ಅವರು ಬಿಜೆಪಿ ಸೇರಿ ಸಾಕಷ್ಟು ಹೋರಾಟ ಮಾಡಿಕೊಂಡು ಬಂದಿದ್ದರು. ಭಗವಂತನ ಆಟ ಅವರು ಇಂದು ನಮ್ಮೊಂದಿಗೆ ಇಲ್ಲ. ಆದರೆ ಅವರ ಕುಟುಂಬಸ್ಥರು ಹಾಗೂ ಅನುಯಾಯಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಛಲವಾದಿ ಮಹಾಸಭಾ ಕೂಡ ಬಹಳ ದೊಡ್ಡ ಸಂಘಟನೆ. ಈ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದೆ ಎಂದರು.

    ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಎಸ್‌ಪಿ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಯಾವುದೇ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳ ಬಗ್ಗೆ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

    – ವಕ್ತಾರರಾಗಿ ತೇಜಸ್ವಿನಿ ಗೌಡ

    ವಿಧಾನ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ ಕಾಂಗ್ರೆಸ್ ವಕ್ತಾರಾಗಿ ನೇಮಕಗೊಂಡಿದ್ದಾರೆ. ಅವರನ್ನು ಬರಮಾಡಿಕೊಂಡ ಡಿ.ಕೆ.ಶಿವಕುಮಾರ್, ತೇಜಸ್ವಿನಿಯವರು ದೆಹಲಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದು, ಅವರು ಕಾಂಗ್ರೆಸ್ ಮೂಲದವರು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಈ ದೇಶಕ್ಕೆ ಒಳ್ಳೆಯದಾಗಲಿದೆ ಎಂದು ಪಕ್ಷಕ್ಕೆ ಬಂದಿದ್ದಾರೆ. ಇಂದಿನಿಂದ ತೇಜಸ್ವಿನಿ ಗೌಡ ಅವರನ್ನು ಪಕ್ಷದ ಅಧಿಕೃತ ವಕ್ತಾರರಾಗಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಇದೇ ವೇಳೆ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts