More

    ಮುಂಗಾರು 2.90 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ

    ಯಾದಗಿರಿ: ಕರೊನಾ ವೈರಸ್ ನಿಯಂತ್ರಣ ಸಂಬಂಧ ಲಾಕ್ಡೌನ್ ಇದ್ದರೂ ಕೃಷಿ ಚಟುವಟಿಕೆಗೆ ಯಾವುದೇ ರೀತಿಯ ನಿರ್ಬಂಧ ಇಲ್ಲ ಎಂದು ಜಂಟಿ ಕೃಷಿ ನಿರ್ದೇಶಕಿ ಆರ್. ದೇವಿಕಾ ತಿಳಿಸಿದರು.

    ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಕ್ಷೇತ್ರದ ಗುರಿಗೆ ಪೂರಕವಾಗಿ 25,383 ಕ್ವಿಂಟಲ್ ಬಿತ್ತನೆ ಬೀಜದ ಅವಶ್ಯಕತೆ ಇರುತ್ತದೆ. ಈ ಪೈಕಿ 16,801.5 ಕ್ವಿಂಟಲ್ ಕೆಎಸ್ಎಸ್ಸಿ, ಎನ್ಎಸ್ಸಿ ಹಾಗೂ ಖಾಸಗಿ ಪೂರೈಕೆದಾರರಿಗೆ ಬಿತ್ತನೆ ಬೀಜ ಪೂರೈಸಲು ಕಾಯರ್ಾದೇಶ ನೀಡಲಾಗಿದೆ. ಜಿಲ್ಲೆಯಲ್ಲಿ ಸಹಕಾರಿ ಸಂಸ್ಥೆ ಮತ್ತು ಖಾಸಗಿ ವಿತರಕರಲ್ಲಿ 21,926 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು, ಏಪ್ರಿಲ್ ತಿಂಗಳಿನಲ್ಲಿ 13,525 ಮೆಟ್ರಿಕ್ ಟನ್ ಪೂರೈಕೆ ಮಾಡಲಾಗಿದೆ. ರೈತರು ಬೆಳೆದ ಬೆಳೆಗಳಿಗೆ ರೋಗ ಮತ್ತು ಕೀಟಗಳ ನಿರ್ವಹಣೆಗಾಗಿ ಜಿಲ್ಲೆಯ ಎಲ್ಲ 16 ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಖಾಸಗಿ ಮಾರಾಟಗಾರರಲ್ಲಿ 52,027 ಲೀಟರ್ ದಾಸ್ತಾನು ಲಭ್ಯವಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

    ಏಪ್ರಿಲ್ ತಿಂಗಳಲ್ಲಿ ಜಿಲ್ಲಾದ್ಯಂತ ಸರಾಸರಿ 18 ಮಿಮೀ ಮಳೆಯಾಗಿದೆ. ಒಟ್ಟು 2.60508 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಒಣ ಭೂಮಿಯಾಗಿದ್ದು, 1,79,156 ಹೆಕ್ಟೇರ್ ನೀರಾವರಿ ಕ್ಷೇತ್ರವಿದೆ. ಬಿತ್ತನೆ ಕಾರ್ಯದಲ್ಲಿ ತೊಡಗಿಕೊಳ್ಳುವ ರೈತರಿಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಸ್ಯಾನಿಟೈಜರ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

    ಜಿಲ್ಲೆಯ ರೈತರಿಗೆ ಕೃಷಿ ಉತ್ಪನ್ನಗಳ ಸಾಗಾಣಿಕೆ, ಕೃಷಿ ಯಂತ್ರೋಪಕರಣಗಳ ಪೂರೈಕೆ ಇತ್ಯಾದಿಗಳ ಸಹಾಯಕ್ಕಾಗಿ ಅಗ್ರಿ ವಾರ್ ರೂಮ್ ತೆರೆಯಲಾಗಿದ್ದು, ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿ,ಸಿಬ್ಬಂ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts