

ಉಧಂಪುರ: ಇಂದು (26) ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಬಸಂತ್ಗಢ ಪ್ರದೇಶದಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಲಾಗಿದೆ.
ಹತ್ಯೆಗೀಡಾದ ಭಯೋತ್ಪಾದಕ ಪಾಕಿಸ್ತಾನದವನಾಗಿದ್ದು, ಜೈಶ್-ಎ-ಮೊಹಮ್ಮದ್ಗೆ ಸೇರಿದವನೆಂದು ಹೇಳಲಾಗುತ್ತಿದೆ. ಇನ್ನೂ ಮೂವರು ಭಯೋತ್ಪಾದಕರು ಬಸಂತ್ಗಢದ ಎತ್ತರದ ಪ್ರದೇಶಗಳಲ್ಲಿ ಅಡಗಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಭದ್ರತಾ ಪಡೆಗಳಿಗೆ ಬಂದ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭವಾಯಿತು ಎಂದು ಸೇನೆ ತಿಳಿಸಿದೆ.
(ಏಜೆನ್ಸೀಸ್)
ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಸೇನೆ ಮತ್ತು ಪೊಲೀಸರ ಜಂಟಿ ಶೋಧ ತಂಡ ಇಂದು ಬೆಳಗ್ಗೆ ಬಸಂತ್ಗಢದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದಾಗ ಗುಂಡಿನ ಚಕಮಕಿ ಆರಂಭವಾಗಿದೆ. ಕಾರ್ಯಾಚೆಣೆ ಮುಂದುವರೆಸಲು ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಸಹ ರವಾನಿಸಲಾಗಿದೆ.