ವೀರಮಂಗಲ ಶಾಲೆಗೆ ಪಿ.ಎಂ. ಕಾರ್ಯಾಲಯದ ಜಂಟಿ ಕಾರ್ಯದರ್ಶಿ ಭೇಟಿ : ಪಿಎಂಶ್ರೀ ಚಟುವಟಿಕೆ, ಅಭಿವೃದ್ಧಿ ಬಗ್ಗೆ ಮೆಚ್ಚುಗೆ

New Project (16)
Published on

ವಿಜಯವಾಣಿ ಸುದ್ದಿಜಾಲ ಪುತ್ತೂರು ಗ್ರಾಮಾಂತರ

ವೀರಮಂಗಲದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಧಾನಮಂತ್ರಿ ಕಾರ್ಯಾಲಯದ ಜಂಟಿ ಕಾರ್ಯದರ್ಶಿ ಚಂದ್ರಮೋಹನ್ ಠಾಕೂರ್ ಮತ್ತು ಸಮಗ್ರ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕಿ ವಿದ್ಯಾಕುಮಾರಿ ಅವರನ್ನೊಳಗೊಂಡ ಅಧಿಕಾರಿಗಳ ತಂಡ ಶುಕ್ರವಾರ ಭೇಟಿ ನೀಡಿ ಪಿಎಂಶ್ರೀ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಶಾಲೆಯಲ್ಲಿನ ಪಿಎಂಶ್ರೀ ಕಾರ್ಯಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದ ಅಧಿಕಾರಿಗಳು ಪಿಎಂಶ್ರೀಯ ಪ್ರತಿಯೊಂದು ಅಂಶಗಳನ್ನು ಅತ್ತುತ್ತಮ ರೀತಿಯಲ್ಲಿ ಕಾರ್ಯಗತಗೊಳಿಸಿರುವ ಕುರಿತು ಹಾಗೂ ಶಾಲೆಯ ಅಭಿವೃದ್ಧಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ದ.ಕ. ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶಿಧರ್ ಜಿ.ಎಸ್., ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಎಪಿಸಿ ವಿದ್ಯಾಕುಮಾರಿ, ಅಕ್ಷರದಾಸೋಹ ಸಹ ನಿರ್ದೇಶಕ ವಿಷ್ಣುಪ್ರಸಾದ್, ಶಿಕ್ಷಣ ಇಲಾಖೆ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ಶಿಕ್ಷಣ ಸಂಯೋಜಕ ಹರಿಪ್ರಸಾದ್, ಎಸ್‌ಎಸ್‌ಕೆ ಕಚೇರಿಯ ಉಷಾ ಬಂಗೇರ, ನರಿಮೊಗರು ಸಿಆರ್‌ಪಿ ಪರಮೇಶ್ವರಿ ಜತೆಗಿದ್ದರು.

ಶಾಲಾ ಮುಖ್ಯ ಶಿಕ್ಷಕ ತಾರಾನಾಥ ಪಿ., ಎಸ್‌ಡಿಎಂಸಿ ಅಧ್ಯಕ್ಷ ರವಿಚಂದ್ರ, ಶಿಕ್ಷಕರಾದ ಹರಿಣಾಕ್ಷಿ, ಶೋಭಾ, ಶ್ರೀಲತಾ, ಕವಿತಾ, ಹೇಮಾವತಿ, ಶಿಲ್ಪರಾಣಿ, ಸೌಮ್ಯಾ ಅವರು ಅಧಿಕಾರಿಗಳನ್ನು ಬರಮಾಡಿಕೊಂಡು, ಶಾಲೆಯಲ್ಲಿ ಅನುಷ್ಠಾನಗೊಂಡ ಪಿಎಂಶ್ರೀ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಪಿಎಂಶ್ರೀ ಚಟುವಟಿಕೆಗಳ ಅನುಷ್ಠಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಕರ್ನಾಟಕ ರಾಜ್ಯದಲ್ಲೇ ಅತ್ಯುತ್ತಮ ಸಾಧನೆ ಮಾಡಿದೆ ಎಂದು ಚಂದ್ರಮೋಹನ್ ಠಾಕೂರ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net