ಅರಣ್ಯ ಜಮೀನು ಜಂಟಿ ಸರ್ವೇ ಮತ್ತೆ ಶುರು?

blank

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ವಲಯದ ಜಿನಗಲಕುಂಟೆ ಅರಣ್ಯ ಜಾಗವನ್ನು ಜಂಟಿ ಸರ್ವೇ ಮೂಲಕ ಒತ್ತುವರಿ ತೆರವುಗೊಳಿಸಿ, ವರದಿ ನೀಡುವಂತೆ ಜಿಲ್ಲಾ ಅರಣ್ಯ ಅಽಕಾರಿಗಳಿಗೆ ರಾಜ್ಯ ಅರಣ್ಯ ಇಲಾಖೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಿಂದ ಪತ್ರದ ಬಂದಿರುವುದು ಮತ್ತೊಂದು ಸುತ್ತಿನ ತೆರವು ಕಾರ್ಯಾಚರಣೆಯನ್ನು ಖಚಿತಪಡಿಸಿದೆ.
ಜಿನಗಲಕುಂಟೆ ಭಾಗದಲ್ಲಿ ಅರಣ್ಯ ಜಮೀನನ್ನು ಮಾಜಿ ಸಚಿವ ಕೆ.ಆರ್.ರಮೇಶ್ ಕುಮಾರ್ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಇತ್ತು, ಅರಣ್ಯ ಇಲಾಖೆ ಮತ್ತು ರಮೇಶ್ ಕುಮಾರ್ ಮಧ್ಯೆ ನಡೆಯುತ್ತಿದ್ದ ಕಾನೂನು ಹೋರಾಟ ಈಗ ತಾರ್ಕಿಕ ಹಂತ ತಲುಪಿದ್ದು, ರಾಜ್ಯ ಇಲಾಖೆಯಿಂದ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಬರೆದಿರುವ ಪತ್ರವೇ ಸಾಕ್ಷಿಯಾಗಿದೆ.
ಶ್ರೀನಿವಾಸಪುರ ಅರಣ್ಯ ವಲಯದ ಜಿನಗಲಕುಂಟೆ ಗ್ರಾಮದ ಸರ್ವೇ ನಂ.1 ಮತ್ತು 2 ರಲ್ಲಿನ 61 ಎಕರೆ 39 ಗುಂಟೆ ಅರಣ್ಯ ಪ್ರದೇಶ ಒತ್ತುವರಿಯಾಗಿದೆ. ಸದರಿ ಸರ್ವೇ ನಂಬರ್ ಜಮೀನನ್ನು ಜಂಟಿ ಸರ್ವೇ ಮಾಡಿಸಬೇಕು. ಒತ್ತುವರಿ ಕಂಡು ಬಂದರೆ ತೆರವುಗೊಳಿಸಲು ಅಗತ್ಯ ಕ್ರಮ ಜರುಗಿಸಬೇಕು. ಈ ಬಗ್ಗೆ ಗಮನ ಹರಿಸಿ ತೆಗೆದುಕೊಂಡ ಕ್ರಮದ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ರಾಜ್ಯ ಅರಣ್ಯ ಇಲಾಖÉಯ ಸಂರಕ್ಷಣಾಧಿಕಾರಿ ಶಿವಶಂಕರ್ ಸೆಂಗುಟ್ಟಿವೇಲ್ ಅವರು ಬುಧವಾರ ಪತ್ರ ಬರೆದು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಅರಣ್ಯ ಒತ್ತುವರಿ ಆರೋಪದ ಹಿನ್ನೆಲೆಯಲ್ಲಿ ರಮೇಶ್‌ಕುಮಾರ್ ಅವರು ಸ್ವಾಧೀನದಲ್ಲಿದ್ದ ಜಮೀನನ್ನು ದುರಸ್ತಿ ಮಾಡಿಕೊಡುವಂತೆ ಕಂದಾಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಜಮೀನಿನ ಮಾಲೀಕತ್ವಕ್ಕಾಗಿ ದಾಖಲೆ ಮಂಡಿಸಿದ್ದರು. ಹೈಕೋರ್ಟ್ನಲ್ಲಿ ವಿಚಾರಣೆ ನಡೆದು ಅರಣ್ಯ ಜಮೀನು ಒತ್ತುವರಿ ಆಗಿರುವುದು ಕಂಡು ಬಂದಲ್ಲಿ ತೆರವುಗೊಳಿಸಿ ಕ್ರಮ ಜರುಗಿಸಬೇಕು ಎಂದು 2013ರ ಜುಲೈ 11ರಂದು ನೀಡಿದ್ದ ತೀರ್ಪನ್ನು ಅಧಿಕಾರಿಗಳು ಪಾಲಿಸಿರಲಿಲ್ಲ. ಈಗ ಕೇಂದ್ರದಿAದ ರಾಜ್ಯಕ್ಕೆ, ರಾಜ್ಯದಿಂದ ಜಿಲ್ಲೆಗೆ ಪತ್ರಗಳು ರವಾನೆ ಆಗಿರುವುದು ಅಧಿಕಾರಿಗಳಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.
ಶ್ರೀನಿವಾಸಪುರ ತಾಲೂಕು ಸೇರಿ ಜಿಲ್ಲಾದ್ಯಂತ ಡಿಸಿಎಫ್ ಏಡುಕೊಂಡಲು ನೇತೃತ್ವದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಚರಣೆ ನಡೆಯುತ್ತಿದ್ದು, ಇದು ಮೊದಲು ಆರಂಭವಾಗಿದ್ದು ಶ್ರೀನಿವಾಸಪುರದಿಂದ. ರಾಜಕೀಯ ಒತ್ತಡಗಳಿಗೂ ಮಣಿಯದ ಅರಣ್ಯಾಽಕಾರಿಗಳು ಸಾವಿರಾರು ಎಕರೆ ಅರಣ್ಯ ಭೂಮಿ ವಶಕ್ಕೆ ಪಡೆಯುತ್ತಿದ್ದಾರೆ.

* ಒತ್ತುವರಿ ತೆರವಿನಲ್ಲಿ ಪಕ್ಷಪಾತದ ಆರೋಪ!
ಜಿನಗಲಕುಂಟೆ ಅರಣ್ಯ ಭೂಮಿ ಒತ್ತುವರಿ ನಡೆದಿರಲಿಲ್ಲ, ಇದು ಹಲವು ರೀತಿಯ ಚರ್ಚೆಗಳಿಗೆ ಗ್ರಾಸವಾಗಿತ್ತು. ಅಲ್ಲದೆ ಭೂಮಿ ಕಳೆದುಕೊಂಡಿದ್ದ ಹಾಗೂ ವಿವಿಧ ಸಂಘ-ಸಂಸ್ಥೆಗಳವರು, ಬಲಾಢ್ಯರು ಮಾಡಿಕೊಂಡಿರುವ ಒತ್ತುವರಿ ಏಕೆ ತೆರವುಗೊಳಿಸುತ್ತಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸುತ್ತಿದ್ದರು. ಇದು ಅಕಾರಿಗಳಿಗೆ ಒಂದು ರೀತಿಯ ಇರಿಸುಮುರಿಸು ಉಂಟುಮಾಡಿತ್ತು. ಒತ್ತುವರಿಯಲ್ಲಿ ಪಕ್ಷಪಾತ ನಡೆದಿದೆ ಎಂದು ಕೆಲ ಸ್ಥಳೀಯರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ದೂರು ಸಲ್ಲಿಸಿದ್ದರು ಎಂದು ಹೇಳಲಾಗಿದೆ. ಈ ದೂರು ಆಧರಿಸಿ ಕೇಂದ್ರ ಸರ್ಕಾರದ ಅರಣ್ಯ ಮಂತ್ರಾಲಯವು ಅಗತ್ಯ ಕ್ರಮ ತೆಗೆದುಕೊಳ್ಳಲು ಈಗ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

* ಅಧಿಕಾರಿಯ ಎತ್ತಂಗಡಿ ಹುನ್ನಾರ?
ಜಿನಗಲಕುಂಟೆ ಅರಣ್ಯ ಪ್ರದೇಶದ ಸರ್ವೆ ನಂ.1 ಮತ್ತು 2 ರ ಜಮೀನು ಜಂಟಿ ಸರ್ವೇ ಮಾಡಿ ತೆರವುಗೊಳಿಸಲು ಕೇಂದ್ರ ಅರಣ್ಯ ಇಲಾಖೆ ಅಽಕಾರಿಗಳು, ರಾಜ್ಯ ಅರಣ್ಯ ಅಧಿಕಾರಿಗಳಿಗೆ ಒಂದು ತಿಂಗಳ ಗಡುವು ನೀಡಿ ಪತ್ರ ಬರೆದಿದ್ದಾರೆ. ಇದರ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಜಿಲ್ಲಾ ಅರಣ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದು, ಪಾಲಿಸಲೇಬೇಕಾದ ಅನಿವಾರ್ಯತೆ ಬಂದಿದೆ. ಈ ಎಲ್ಲದರ ನಡುವೆ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಅವರನ್ನು ಜಿಲ್ಲೆಯಿಂದ ಎತ್ತಂಗಡಿ ಮಾಡುವ ಹುನ್ನಾರ ಸರ್ಕಾರದಮಟ್ಟದಲ್ಲಿ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ.

Share This Article

ಕಣ್ಣಿಗೊಂದು ಸವಾಲ್…ಈ ಫೋಟೋದಲ್ಲಿರುವ ಹಾವನ್ನು ಗುರುತಿಸಬಲ್ಲಿರಾ? Optical Illusion..

Optical Illusion: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ…

Tea….ಒಂದು ತಿಂಗಳು ಟೀ ಕುಡಿಯುವುದನ್ನು ಬಿಟ್ಟರೆ ಏನಾಗುತ್ತೆ ಗೊತ್ತಾ?

Tea: ಬೆಳಗ್ಗೆ ಎದ್ದ ತಕ್ಷಣ ಬಿಸಿ ಬಿಸಿ ಟೀ ಕುಡಿದರೆ ಸಿಗುವ ಸಂತೋಷ ಅಷ್ಟಿಷ್ಟಲ್ಲ. ಹಾಗಿದ್ದರೂ,…

ಈ ಅಭ್ಯಾಸಗಳಿಂದ ನೀವು ಶ್ವಾಸಕೋಶ ಕ್ಯಾನ್ಸರ್​ಗೆ​ ತುತ್ತಾಗಬಹುದು ಎಚ್ಚರ! ತಡೆಗಟ್ಟದ್ದಿದ್ರೆ ಸಾವು ಕಟ್ಟಿಟ್ಟಬುತ್ತಿ | Lung Cancer

Lung Cancer: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾದವರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ. ವಯಸ್ಸಿನ…