More

    ಹೃದಯಾಘಾತದಿಂದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನ

    ಬೆಂಗಳೂರು: ಸ್ಯಾಂಡಲ್​​ವುಡ್​​ನ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಕನ್ನಡ ಚಿತ್ರರಂಗ ಸೇರಿ ಹಲವಾರು ಭಾಷೆಗಳಲ್ಲಿ ಸಾಹಸ ನಿರ್ದೇಶನ ಮಾಡಿದ್ದ ಜಾಲಿ ಬಾಸ್ಟಿನ್  57 ನೇ ವಯಸ್ಸಿನಲ್ಲಿ ಹಠಾತ್ ಹೃದಯಘಾತದಿಂದ ಡಿಸೆಂಬರ್‌ 26 ಮಂಗಳವಾರದಂದು ನಿಧನ ಹೊಂದಿದ್ದಾರೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಸಾವಿರಾರು ಚಿತ್ರಗಳಿಗೆ ಸಾಹಸ ದೃಶ್ಯಗಳನ್ನು ಕಂಪೋಸ್ ಮಾಡಿರುವ ಜಾಲಿ ಬಾಸ್ಟಿನ್, ಬಹುಬೇಡಿಕೆ ಸ್ಟಂಟ್ ಮಾಸ್ಟರ್ ಆಗಿದ್ದರು.

    ಸ್ಟಂಟ್‌ ಡೈರೆಕ್ಟರ್‌ ಜಾಲಿಯವರು ಕೇರಳದ ಅಲೆಪ್ಪೆಯಲ್ಲಿ 1966ರಲ್ಲಿ ಹುಟ್ಟುದ್ದರೂ, ಇವರು ಬೆಳೆದಿದ್ದು  ಎಲ್ಲಾ ಬೆಂಗಳೂರಿನಲ್ಲೇ. ಅವರು ಬೆಂಗಳೂರಿನಲ್ಲೇ ಶಿಕ್ಷಣ ಪಡೆದು, ಬಳಿಕ ಬೈಕ್ ಮೆಕಾನಿಕ್ ಆಗಿ ಜಾಲಿ ಬಾಸ್ಟಿನ್ ವೃತ್ತಿ ಆರಂಭಿಸಿದರು. ಜಾಲೀ ಬಾಸ್ಟಿನ್‌  ಕೇವಲ 17ನೇ ವಯಸ್ಸಿನಲ್ಲಿದ್ದಾಗ, ಇವರನ್ನು ಗುರುತಿಸಿದ ಕೆಲವರು ಸ್ಟಂಟ್​ಮನ್ ಆಗಿ ಚಿತ್ರರಂಗಕ್ಕೆ ಪರಿಚಯಿಸಿದರು.

    ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಜಾಲಿ ಬಾಸ್ಟಿನ್, ಕ್ರೇಜಿಸ್ಟಾರ್ ರವಿಚಂದ್ರನ್ ಕಣ್ಣಿಗೆ ಬಿದ್ದು, ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದರು. ಪ್ರೇಮಲೋಕ ಸೇರಿದಂತೆ ರವಿಚಂದ್ರನ್ ಅವರ ಬಹುತೇಕ ಚಿತ್ರಗಳಿಗೆ ಇವರ ಸಾಹಸ ನಿರ್ದೇಶನವಿದೆ. ಶಾಂತಿ ಕ್ರಾಂತಿಗಾಗಿ ಮಾಡಿದ ಸಾಹಸ ದೃಶ್ಯಗಳ ಕಂಪೋಸ್ ಇವತ್ತಿಗೂ ನೆನಪಿನಲ್ಲಿ ಉಳಿಯುವಂಥದ್ದು. ತದನಂತರ ಜಾಲಿ ಅವರು ಈವರೆಗೆ 900ಕ್ಕೂ ಅಧಿಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts