More

    ಜಾಲಿ ಕಡಲ ತೀರ ಡೇಂಜರ್ ಜೋನ್

    ಭಟ್ಕಳ: ತೌಕ್ತೆ ಚಂಡಮಾರುತ ಪ್ರಭಾವ ಹೆಚ್ಚಾಗಿದ್ದು, ಕರಾವಳಿಯ ಕಡಲತೀರದ ನಿವಾಸಿಗಳಿಗೆ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಭಟ್ಕಳದ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಡಲ ತೀರವನ್ನು ಅಪಾಯದ ಪ್ರದೇಶವೆಂದು ಘೊಷಿಸಿದೆ.
    ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಮುದ್ರ ತೀರವನ್ನು ಡೆಂಜರ್ ಜೋನ್ ಎಂದು ಘೊಷಿಸಲಾಗಿದೆ. ತಾಲೂಕಿನ ಬಂದರ, ಬೆಳಕೆ, ಸೇರಿದಂತೆ ಇತರೆಡೆಯೂ ಕಡಲಿನ ಅಬ್ಬರ ಜೋರಾಗಿದ್ದು ಸಮುದ್ರಕೊರೆತದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಭಟ್ಕಳ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲ ಸಮುದ್ರ ತೀರಗಳಿಗೆ ಪಪಂ ಮುಖ್ಯಾಧಿಕಾರಿ ಅಜೇಯ ಭಂಡಾರಕರ್ ತೆರಳಿ ತೀರದ ನಿವಾಸಿಗಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
    ಕೊಚ್ಚಿ ಹೋಗುತ್ತಿದ್ದ ತನ್ನ ದೋಣಿಯನ್ನು ದಡಕ್ಕೆ ತರಲೆಂದು ಸಮುದ್ರ ತೀರಕ್ಕೆ ಇಳಿದ ಮೀನುಗಾರ ಜಾಲಿಕೋಡಿ ನಿವಾಸಿ ಲಕ್ಷ್ಮಣ ಈರಪ್ಪ ನಾಯ್ಕ(60) ಎರಡು ದೋಣಿಗಳ ನಡುವೆ ಸಿಲುಕಿ ಮೃತಪಟ್ಟಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts