More

    ಕೇಂದ್ರದ ಸಹಕಾರಕ್ಕೆ ಜೋಶಿ ಕೃತಜ್ಞತೆ, ಬಿಎಂಐಸಿ ಯೋಜನೆಗೆ ಟೆಂಡರ್

    ಹುಬ್ಬಳ್ಳಿ: ಕೈಗಾರಿಕಾ ಮತ್ತು ವಾಣಿಜ್ಯ ಸಚಿವಾಲಯದ ಮಹತ್ತರ ಯೋಜನೆಯಾದ ಬೆಂಗಳೂರು ಮುಂಬೈ ಕೈಗಾರಿಕಾ ಕಾರಿಡಾರ್ (ಬಿಎಂಐಸಿ) ಧಾರವಾಡ ವ್ಯಾಪ್ತಿಯನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ನಿಗಮದಡಿ ಅಭಿವೃದ್ಧಿಪಡಿಸುವ ಕೇಂದ್ರ ಸರ್ಕಾರದ ಯೋಜನೆಗೆ ಇದೀಗ ಟೆಂಡರ್ ಆಹ್ವಾನಿಸುವ ಮೂಲಕ ಚಾಲನೆ ಸಿಕ್ಕಿರುವುದಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹರ್ಷ ವ್ಯಕ್ತಪಡಿಸಿದ್ದಾರೆ.

    ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಐಎಡಿಬಿ) ಬಿಎಂಐಸಿಯ ಧಾರವಾಡ ವ್ಯಾಪ್ತಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತ ಕೈಗಾರಿಕಾ ವಸಾಹತು ಅಭಿವೃದ್ಧಿಗೆ ಕಳೆದ ವಾರವಷ್ಟೇ ಟೆಂಡರ್ ಕರೆದಿದೆ.

    ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡುವ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಸ್ ಗೋಯಲ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಜೋಶಿ ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.

    ಬೆಂಗಳೂರು ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ನಲ್ಲಿ (ಬಿಎಂಐಸಿ) ಬರುವ ಧಾರವಾಡ ಪ್ರದೇಶವನ್ನು ಅಭಿವೃದ್ಧಿ ಪಡಿಸಲು ಕೆಐಎಡಿಬಿ ಬೆಂಗಳೂರು ಕಚೇರಿಯಿಂದ ಮಾರ್ಚ್ 15ರಂದು ಅರ್ಹ ಗುತ್ತಿಗೆದಾರರಿಂದ ಟೆಂಡರ್ ಆಹ್ವಾನಿಸಲಾಗಿತ್ತು.

    ಧಾರವಾಡ ತಾಲೂಕಿನ ಕೋಟೂರ- ಬೇಲೂರು ಬಳಿಯಲ್ಲಿ ಇದಕ್ಕಾಗಿ ಜಾಗ ಗುರುತಿಸಲಾಗಿದೆ. ಅದರಲ್ಲಿ ಕೈಗಾರಿಕಾ ಬಡಾವಣೆ ಹಾಗೂ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಯೋಜಿಸಲಾಗಿದೆ.
    ಈ ಕುರಿತು ವಿಜಯವಾಣಿ ಸೋಮವಾರ “ಬಿಎಂಐಸಿ ಕಾರಿಡಾರ್ ಯೋಜನೆಗೆ ಚಾಲನೆ’ ಕುರಿತು ವಿಶೇಷ ವರದಿ ಪ್ರಕಟಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts