More

  ಕೇಂದ್ರ ಸಚಿವ ಜೋಶಿಗೆ ಅದ್ಧೂರಿ ಸ್ವಾಗತ, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಮೆರವಣಿಗೆ

  ಹುಬ್ಬಳ್ಳಿ: ನರೇಂದ್ರ ಮೋದಿ ಅವರ ಸಂಪುಟದಲ್ಲಿ ಎರಡನೇ ಬಾರಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿ ಇದೇ ಮೊದಲ ಬಾರಿ ನಗರಕ್ಕೆ ಆಗಮಿಸಿದ ಪ್ರಲ್ಹಾದ ಜೋಶಿ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು.

  ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾನಗರ ಪಾಲಿಕೆ ಸದಸ್ಯರು, ಕಾರ್ಯಕರ್ತರು, ಮುಖಂಡರು ಹಾಗೂ ಅವರ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿ ಜಯಘೋಷ ಮೊಳಗಿಸಿದರು.

  ಹುಬ್ಬಳ್ಳಿಗೆ ಆಗಮಿಸಿದ ಪ್ರಲ್ಹಾದ ಜೋಶಿ ಅವರನ್ನು ವಿಮಾನ ನಿಲ್ದಾಣದಲ್ಲಿ ಹೂಗುಚ್ಚ ನೀಡಿ ಬರಮಾಡಿಕೊಳ್ಳಲಾಯಿತು. ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಬಳಿ ಬೃಹತ್ ಸೇಬು ಹಾರ ಹಾಕಿ ಸನ್ಮಾನಿಸಲಾಯಿತು.

  ಅಲ್ಲಿಂದ ವಿವಿಧ ವಾದ್ಯಮೇಳಗಳೊಂದಿಗೆ ಗೋಕುಲ ರಸ್ತೆಯಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ನೂರಾರು ಬೈಕ್ಗಳಿಂದ ರ್ಯಾಲಿ ನಡೆಸಲಾಯಿತು. ದಾರಿಯುದ್ದಕ್ಕೂ ಕಾರ್ಯಕರ್ತರು ಜೈಕಾರ ಕೂಗಿದರು. ಹೂವಿನ ಮಾಲೆ ಹಾಕಿ ಅಭಿಮಾನ ವ್ಯಕ್ತಪಡಿಸಿದರು.

  ಮಾರ್ಗ ಮಧ್ಯದಲ್ಲಿ ಬರುವ ಸಿಂಧೂರ ಲಕ್ಷ್ಮಣ, ಬಸವೇಶ್ವರ, ಕಿತ್ತೂರ ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಡಾ. ಬಾಬಾಸಾಹೇಬ ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಸಚಿವ ಜೋಶಿ ಅವರು ಮಹನೀಯರಿಗೆ ಗೌರವ ಸಲ್ಲಿಸಿದರು.

  ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಪ್ರದಿಪ ಶೆಟ್ಟರ, ಮೇಯರ್ ವೀಣಾ ಬರದ್ವಾಡ, ಪಾಲಿಕೆ ಮಾಜಿ ಸದಸ್ಯ ರಂಗಾ ಬದ್ದಿ, ಮಹೇಂದ್ರ ಕೌತಾಳ, ಸಂತೋಷ ಚವ್ಹಾಣ, ಮುಂತಾದವರು ಇದ್ದರು.

  See also  21 ಕೋಟಿ ವ್ಯಯವಾದರೂ ಸದ್ಬಳಕೆ ಅನುಮಾನ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts