More

    ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ ರಾವ್ ನಿಧನ

    ಬೆಂಗಳೂರು:
    ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ ರಾವ್ (75) ಅವರು ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
    ಸಂಯುಕ್ತ ಕರ್ನಾಟಕ ಮತ್ತು ಪ್ರಜಾವಾಣಿ ಪತ್ರಿಕೆಯಲ್ಲಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದ
    ಅವರು, ಅಂಕಣಕಾರರಾಗಿ ಮತ್ತು ಟಿವಿ ಡಿಬೇಟ್‌ಗಳಲ್ಲಿ ರಾಜಕೀಯ ವಿಶ್ಲೇಷಣೆಗಾರರಾಗಿ ಗಮನಸೆಳೆದಿದ್ದರು. ಕಳೆದ 2 ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ಪತ್ನಿ, ಪುತ್ರಿ ಮತ್ತು ಪುತ್ರನನ್ನು ಅಗಲಿದ್ದಾರೆ.
    ಮೃತರ ಅಂತ್ಯ ಸಂಸ್ಕಾರ ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಸಂಜೆ ನಡೆಯಿತು.
    ಭಾಸ್ಕರ ರಾವ್ ನಿಧನಕ್ಕೆ ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

    ಕೆಯುಡಬ್ಲೂೃಜೆ ಶೋಕ
    ಕ್ರಿಯಾಶೀಲ ಪತ್ರಕರ್ತರಾಗಿದ್ದ ಭಾಸ್ಕರ ರಾವ್ ಅವರ ನಿಧನದಿಂದ ಸುದ್ದಿ ಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಶೋಕಿಸಿದೆ.
    ಕಲಬುರಗಿಯಲ್ಲಿ ನಡೆದ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಸ್ಕರ ರಾವ್ ಅವರಿಗೆ ಕೆಯುಡಬ್ಲ್ಯೂಜೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಮೂರು ತಿಂಗಳ ಹಿಂದೆ ಅವರ ಮನೆಗೆ ತೆರಳಿ ಮನೆಯಂಗಳದಲ್ಲಿ ನಮನ ಕಾರ್ಯಕ್ರಮದಲ್ಲಿ ಭಾಸ್ಕರ ರಾವ್ ದಂಪತಿಗಳನ್ನು ಕೆಯುಡಬ್ಲ್ಯೂಜೆ ಸನ್ಮಾನಿಸಿತ್ತು ಎಂದು ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts