More

    ಹಿರಿಯ ಪತ್ರಕರ್ತ ಡಿ. ಉಮಾಪತಿ ಅವರಿಗೆ ಡಾ. ಬಿ.ಆರ್. ಅಂಬೇಡ್ಕರ್ ದತ್ತಿ ನಿಧಿ ಪ್ರಶಸ್ತಿ

    ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ 2022-23ನೇ ಸಾಲಿನ ಪ್ರತಿಷ್ಠಿತ “ಡಾ.ಬಿ.ಆರ್ ಅಂಬೇಡ್ಕರ್ ದತ್ತಿ ಪ್ರಶಸ್ತಿ”ಗೆ ಹಿರಿಯ ಪತ್ರಕರ್ತ ಡಿ. ಉಮಾಪತಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10 ಸಾವಿರ ರೂ. ನಗದು, ಪ್ರಶಸ್ತಿ ಫಲಕ ಹೊಂದಿದೆ.

    ಬಾಗಲಕೋಟೆಯ ಹಿರಿಯ ಪತ್ರಕರ್ತ ಸುಭಾಷ್ ಹೊದ್ಲೂರು ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿಯ ದತ್ತಿ ನಿಧಿಯನ್ನು ಸ್ಥಾಪಿಸಿದ್ದರು. 2021-22ನೇ ಸಾಲಿನಿಂದ ಈ ಪ್ರಶಸ್ತಿಯನ್ನು ವೃತ್ತಿಪರ-ಸಾಧಕ ಪತ್ರಕರ್ತರಿಗೆ ಪ್ರದಾನ ಮಾಡಲಾಗುತ್ತಿದೆ. ಮೊದಲನೇ ವರ್ಷದ ಪ್ರಶಸ್ತಿಯನ್ನು ನಾಡಿನ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರಿಗೆ ಪ್ರದಾನ ಮಾಡಲಾಗಿತ್ತು. ಇದನ್ನೂ ಓದಿ: ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ; ಮೂವರು ಗಂಭೀರ

    ಉಮಾಪತಿ ಅವರು ಬೆಂಗಳೂರಿನಲ್ಲಿ ಹಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದಲ್ಲದೆ, ವಿವಿಧ ಪತ್ರಿಕೆಗಳ ದೆಹಲಿ ವರದಿಗಾರರಾಗಿ ಮೂರು ದಶಕಗಳ ಕಾಲ ಪರಿಣಾಮಕಾರಿ ವರದಿ ಮಾಡಿದ್ದಾರೆ. ಸಂಸತ್ತು ವರದಿ, ಚುನಾವಣಾ ವಿಶ್ಲೇಷಣೆ, ಸುಪ್ರೀಂ ಕೋರ್ಟುನ ನೀರು ನ್ಯಾಯಾಧೀಕರಣ ವ್ಯಾಜ್ಯ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ಹೆಚ್ಚಿನ ಅನುಭವ ಹೊಂದಿದ್ದಾರೆ. ಕನ್ನಡ ಪ್ರಭ, ಈ ಟಿವಿ, ವಿಜಯಕರ್ನಾಟಕ, ಪ್ರಜಾವಾಣಿ ಮುಂತಾದ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅನೇಕ ಪತ್ರಿಕೆಗಳು ಮತ್ತು ವೆಬ್ ಸೈಟ್ ಗಳಿಗೆ ಅಂಕಣಕಾರರೂ ಆಗಿದ್ದಾರೆ. ಇದನ್ನೂ ಓದಿ: ಮಂಗಳೂರು ಕಮಿಷನರ್ ಸೇರಿ 7 ಐಪಿಎಸ್​ ಅಧಿಕಾರಿಗಳ ವರ್ಗಾವಣೆ; ಯಾರು, ಎಲ್ಲಿಗೆ? ಇಲ್ಲಿದೆ ವಿವರ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts