ರುದ್ರಭೂಮಿ ಅಭಿವೃದ್ಧಿಗೆ ಚಿಂತನೆ : ನಾರಾಯಣ ಪಿ.ಎಂ. ಹೇಳಿಕೆ

New Project (8)
Published on

ಮೂಡುಬಿದಿರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಟ್ರಸ್ಟ್ ನೇತೃತ್ವದಲ್ಲಿ ಈ ವರ್ಷ ಆಗಸ್ಟ್ 27ರಿಂದ ಸಮಾಜ ಮಂದಿರದಲ್ಲಿ ನಡೆಯಲಿರುವ ಗಣೇಶೋತ್ಸವದ 62ನೇ ವರ್ಷದ ಸಂಭ್ರಮ ಸರ್ವ ಜನರ ಹಬ್ಬವಾಗಿ ನಡೆಸಲು ಉದ್ದೇಶಿಸಿದ್ದೇವೆ. ಜ್ಯೋತಿನಗರ ಬಳಿ ಇರುವ ಹಿಂದು ರುದ್ರಭೂಮಿಯನ್ನು ಅಭಿವೃದ್ಧಿಪಡಿಸಲು ನಮ್ಮ ಸಮಿತಿಗೆ ಅವಕಾಶ ಕೊಡುವಂತೆ ಮೂಡುಬಿದಿರೆ ಪುರಸಭೆಯನ್ನು ಕೋರಿದ್ದೇವೆ ಎಂದು ಟ್ರಸ್ಟ್ ಅಧ್ಯಕ್ಷ ನಾರಾಯಣ ಪಿ.ಎಂ. ಹೇಳಿದರು.

ಮೂಡುಬಿದಿರೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಪತ್ರಕರ್ತರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.

ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಮೂಡುಬಿದಿರೆ ಗಣೇಶೋತ್ಸವವನ್ನು ಇಲ್ಲಿಯ ಸರ್ವ ಜನರ ಹಬ್ಬವಾಗಿ ಆಚರಿಸುವ ಕಾರ್ಯಕ್ಕೆ ಮುನ್ನುಡಿ ಬರೆದರು. ಈ ಬಾರಿ ಮೂಡುಬಿದಿರೆ ರುದ್ರಭೂಮಿಯನ್ನು ಅಭಿವೃದ್ಧಿಪಡಿಸುವ ಚಿಂತನೆ ಮಾಡಿದ್ದು, ಈ ಬಗ್ಗೆ ಈ ಹಿಂದೆ ಹಲವಾರು ಬಾರಿ ಪುರಸಭೆಯನ್ನು ವಿನಂತಿಸಲಾಗಿದೆ ಎಂದು ತಿಳಿಸಿದರು.

ಈ ಬಾರಿ ಗಣೇಶೋತ್ಸವವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಲಿರುವರು. ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್ ಉಪಸ್ಥಿತರಿರುವರು. ಮೂಡುಬಿದಿರೆ ಪುರಸಭೆ ಗಣೇಶೋತ್ಸವ ಸಂದರ್ಭದಲ್ಲಿ ಪೇಟೆಯ ಅಲಂಕಾರ ನಡೆಸಿ ಸಹಕರಿಸುವಂತೆ ವಿನಂತಿಸಿದರು.

ಸಭೆಯಲ್ಲಿ ಗಣೇಶೋತ್ಸವ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸುದರ್ಶನ ಎಂ., ಉಪಾಧ್ಯಕ್ಷ ಕೊರಗ ಶೆಟ್ಟಿ, ಕೋಶಾಧಿಕಾರಿ ಚೇತನ್ ಕುಮಾರ್ ಶೆಟ್ಟಿ, ಸಮಿತಿ ಸಂಚಾಲಕ ರಾಜಾರಾಮ್ ನಾಗರಕಟ್ಟೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net