25.7 C
Bangalore
Sunday, December 15, 2019

ಬೆಳಗಾವಿ: ಪತ್ರಕರ್ತರ ಕೊಡುಗೆ ದೊಡ್ಡದು

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಬೆಳಗಾವಿ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿವಿಗೆ ಪತ್ರಕರ್ತರ ಕೊಡುಗೆ ದೊಡ್ಡದು ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ.

ಇಲ್ಲಿನ ವಾರ್ತಾ ಭವನದಲ್ಲಿ ಭಾನುವಾರ ಕರ್ನಾಟಕ ಪತ್ರಕರ್ತರ ವಿವಿಧೋದ್ದೇಶಗಳ ಸಹಕಾರಿ ಸಂಘದ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದರು. ಭಾರತವನ್ನು ವಿಶ್ವಗುರು ಮಾಡಲು ಪ್ರಧಾನಿ ನರೇಂದ್ರ ಮೋದಿ ಕಟಿ ಬದ್ಧರಾಗಿದ್ದಾರೆ. ಇದರಲ್ಲಿ ಪತ್ರಕರ್ತರ ಜವಾಬ್ದಾರಿಯೂ ದೊಡ್ಡದಿದೆ. ಗ್ರಾಮೀಣ ಭಾಗದ ಪತ್ರಕರ್ತರೇ ಪತ್ರಿಕೋದ್ಯಮದ ನಿಜವಾದ ಅಡಿಪಾಯವಾಗಿದ್ದಾರೆ. ಪತ್ರಕರ್ತರಿಗೆ ಮನೆ ಕಟ್ಟಲು ಸಾಲ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು.

ಮುಂದಿನ 10 ವರ್ಷಗಳಲ್ಲಿ ರೈಲ್ವೆ ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ 50 ಲಕ್ಷ ಕೋಟಿ ರೂ. ವಿನಿಯೋಗಿಸಲಾಗುವುದು. ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ ಹೇರಳವಾಗಿದೆ. ಕನ್ನಡದ ಜತೆಯಲ್ಲಿ ಇತರೆ ಭಾಷೆಗಳನ್ನೂ ಕಲಿಯುವ ಮೂಲಕ ಜಾಗತಿಕ ಸ್ಪರ್ಧೆಗೆ ಸಜ್ಜಾಗಬೇಕು. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ಯೋಚಿಸದೆ, ಸಮಗ್ರ ಕರ್ನಾಟಕದ ಕಲ್ಯಾಣಕ್ಕೆ ಆದ್ಯತೆ ದೊರೆಯಬೇಕು. ದೇಶದ ಆರ್ಥಿಕತೆ ಬಲಗೊಳ್ಳುತ್ತಿದೆ. ಆರ್ಥಿಕತೆ ವಿಲ ಎಂದು ಸಾಮಾನ್ಯ ಜನ, ರೈತರು ಹೇಳುತ್ತಿಲ್ಲ. ಮಹಾನಗರಗಳಲ್ಲಿ ಕುಳಿತ ಕೆಲವರಷ್ಟೇ ಹಾಗೆಂದು ಆರೋಪಿಸುತ್ತಿದ್ದಾರೆ ಎಂದರು.

ಹೊಸಪೇಟೆ ಕೊಪ್ಪಳ ನಡುವೆ ಇನ್ನು 15 ದಿನದಲ್ಲಿ ರೈಲ್ವೆ ಸೇವೆ ಆರಂಭಿಸಲಾಗುವುದು. ಈಗಾಗಲೇ ದೂಧಸಾಗರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಪ್ರವಾಸೋದ್ಯಮಕ್ಕೂ ಲಾಭವಾಗಲಿದೆ. ರೈಲ್ವೆ ಇಲಾಖೆಯಲ್ಲಿ ಹೊಸ ಯೋಜನೆಗಳಿಗಿಂತ ಬಾಕಿ ಇರುವ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ನಾಗನೂರು ರುದ್ರಾಕ್ಷಿಮಠದ ಸಾವಳಗೀಶ್ವರ ದೇವರು ಆಶೀರ್ವಚನ ನೀಡಿದರು. ಕರ್ನಾಟಕ ಪತ್ರಕರ್ತರ ವಿವಿಧೋದ್ದೇಶಗಳ ಸಹಕಾರಿ ಸಂಘದ ಅಧ್ಯಕ್ಷ ಮುರುಗೇಶ ಶಿವಪೂಜೆ ಮಾತನಾಡಿ, ಸಂಘದ ಚಟುವಟಿಕೆಗಳನ್ನು ಇತರೆ ಜಿಲ್ಲೆಗಳಲ್ಲೂ ವಿಸ್ತರಿಸಬೇಕಾಗಿದೆ ಎಂದರು.

ವಾರ್ತಾ ಇಲಾಖೆ ಅಕಾರಿ ಗುರುನಾಥ ಕಡಬೂರ, ಸಂಘದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ಮಂಜುನಾಥ ನಾಯ್ಕ, ಮಂಗಳೂರು ಜಿಲ್ಲಾ ಅಧ್ಯಕ್ಷ ಸುದೇಶ ಕುಮಾರ, ಇತರರು ಇದ್ದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಸುರೇಶ ಅಂಗಡಿ ಹಾಗೂ ಸಾವಳಗೀಶ್ವರ ದೇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸಂಘದಿಂದ ನೆರವು: ಸಂಘದ ಸದಸ್ಯ ಹಾಗೂ ಗೋಕಾಕದ ಪತ್ರಕರ್ತ ಶಾನೂಲ ಮಾವಕರ ಎಂಬುವರು ಇತ್ತೀಚಿಗೆ ಅಪಘಾತದಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಅವರ ತಾಯಿ ಅಕ್ಕವ್ವ ಅವರಿಗೆ ಸಂಘದ ವತಿಯಿಂದ 1.6 ಲಕ್ಷ ರೂ.ಪರಿಹಾರ ಧನ ನೀಡಲಾಯಿತು.

ಸವಣೂರಿನ ಪತ್ರಕರ್ತ ಮಹೇಶ ಹೆಸರೂರ ಎಂಬುವರು ಮಿದುಳಿನ ರಕ್ತಸ್ರಾವದಿಂದ ಮೃತಪಟ್ಟಿದ್ದು, ಈ ನೋವು ತಡೆಯಲಾರದೇ ಅವರ ಪತ್ನಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಅನಾಥ ಮಗುವಿಗೆ ಕೂಡ ಸಾಧ್ಯವಾದಷ್ಟು ಆರ್ಥಿಕ ನೆರವು ನೀಡಲು  ಸಭೆಯಲ್ಲಿ ನಿರ್ಧರಿಸಲಾಯಿತು.

ವಿಜಯವಾಣಿ ವರದಿಗೆ ಸ್ಪಂದನೆ

ದೃಷ್ಟಿ ಕಸಿದ ಕಿಡಿಗೇಡಿ ಕೀಟಲೆ-ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿ ಪತ್ರಿಕೆ ವಿತರಕ ಮಹಾದೇವ ಎಂಬ ವಿಜಯವಾಣಿಗೆ ವರದಿಗೆ ಸ್ಪಂದಿಸಿ ಕರ್ನಾಟಕ ಪತ್ರಕರ್ತರ ವಿವಿಧೋದ್ದೇಶಗಳ ಸಹಕಾರಿ ಸಂಘದ ಸಭೆಯಲ್ಲಿ ದೃಷ್ಟಿ ಕಳೆದುಕೊಂಡ ಮಹಾದೇವ ಅವರಿಗೆ ಆರ್ಥಿಕ ನೆರವು ನೀಡಲು ನಿರ್ಧರಿಸಲಾಯಿತು. ಸಭೆಗೆ ಅನಾರೋಗ್ಯದ ಕಾರಣ ಮಹಾದೇವ ಉಪಸ್ಥಿತರಿರದ ಕಾರಣ ಶೀಘ್ರದಲ್ಲಿ ಅವರ ಮನೆಗೆ ತೆರಳಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುರುಗೇಶ ಶಿವಪೂಜಿ ತಿಳಿಸಿದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...