More

    ಬೆಳಗಾವಿಯಲ್ಲಿ ಪತ್ರಕರ್ತರ ಅಂತಾರಾಷ್ಟ್ರೀಯ ಕಾರ್ಯಾಗಾರ ; ಯಾರೆಲ್ಲ ಬರ್ತಿದ್ದಾರೆ ಗೊತ್ತಾ?

    ಬೆಳಗಾವಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳಗಾವಿ ಘಟಕದ ಸಹಯೋಗದಲ್ಲಿ ಇದೇ ಮೊದಲ ಬಾರಿಗೆ ಬೆಳಗಾವಿಯಲ್ಲಿ ಜೂ.9ರಿಂದ 11ರ ವರೆಗೆ ಅಂತಾರಾಷ್ಟ್ರೀಯ ಮಾದ್ಯಮ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಜಿಲ್ಲಾ ಘಟಕದ ಗೌರಾವಾಧ್ಯಕ್ಷ ಭೀಮಶಿ ಜಾರಕಿಹೊಳಿ ತಿಳಿಸಿದರು.

    ನಗರದಲ್ಲಿನ ಖಾಸಗಿ ಹೊಟೇಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.9ರಂದು ಅಂತಾರಾಷ್ಟ್ರೀಯ ಪತ್ರಕರ್ತರಿಗೆ ಸ್ಥಳೀಯ ಪ್ರೇಕ್ಷಣಿಯ ಸ್ಥಳಗಳ ದರ್ಶನ, 10ಕ್ಕೆ ಕಾರ್ಯಾಗಾರ ಉದ್ಘಾಟನೆ ಹಾಗೂ ಚಿಂತನಗೋಷ್ಠಿ ಹಾಗೂ 11ರಂದು ಬೀಳ್ಕೊಡುಗೆ ಕಾರ್ಯಕ್ರಮ ಜರುಗಲಿದ್ದು, ಪರಿಸರ ಹಾಗೂ ಮಾದ್ಯಮ ಚಿಂತನಾಗೋಷ್ಠಿ ನಡೆಯಲಿದೆ ಎಂದರು.

    ಬೆಳಗಾವಿಯಲ್ಲಿ ಪತ್ರಕರ್ತರ ಅಂತಾರಾಷ್ಟ್ರೀಯ ಕಾರ್ಯಾಗಾರ ; ಯಾರೆಲ್ಲ ಬರ್ತಿದ್ದಾರೆ ಗೊತ್ತಾ?
    ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ಭೀಮಶಿ ಜಾರಕಿಹೊಳಿ, ಅಧ್ಯಕ್ಷ ದಿಲೀಪ್ ಕುರಂದವಾಡೆ ಮಾತನಾಡಿದರು.

    ಜಿಲ್ಲಾಧ್ಯಕ್ಷ ದಿಲೀಪ್ ಕುರಂದವಾಡೆ ಮಾತನಾಡಿ, ಇಲ್ಲಿನ ಕೆಎಲ್‌ಇ ಜೀರಗೆ ಸಭಾಂಗಣದಲ್ಲಿ ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಾಗಾರವನ್ನು ಜೂ.10ರಂದು ಬೆಳಗ್ಗೆ 11ಕ್ಕೆ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಲಿದ್ದು, ಕಾನಿಪ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಎಚ್.ಆರ್.ರಂಗನಾಥ, ವಿಆರ್‌ಎಲ್ ಮಿಡಿಯಾ ಪ್ರೈ.ಲಿ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

    ಚಿಂತನಾಗೋಷ್ಠಿಯಲ್ಲಿ ಹಿರಿಯ ಪತ್ರಕರ್ತರಾದ ದಕ್ಷಿಣ ಕೋರಿಯಾದ ಗಿತಿಕಾ ತಾಲೂಕದಾರ, ಲಂಡನ್ನಿನ ಘಾತೂಮ್, ಶ್ರೀಲಂಕಾದ ಉಪುಲ್ ಜಯಸಿಂೆ, ನೇಪಾಳದ ಸೌಜ್ಞಾ ಪೌಡೇಲ, ಕರ್ನಾಟಕದ ಡಾ.ಗೀತಾ ಕಿರಣ ಹಾಗೂ ಬಾಂಗ್ಲಾದೇಶದ ಮಹ್ಮದ ಶಾಮೇಮ್ ಅವರು ತಮ್ಮ ಅನುಭವ ಹಾಗೂ ಚಿಂತನೆಯನ್ನು ಪ್ರಸ್ತುತಪಡಿಸುವುದರ ಜತೆಗೆ ಸಂವಾದ ನಡೆಸಲಿದ್ದಾರೆ. ಇನ್ನು ಲಂಡನ್, ಶ್ರೀಲಂಕಾ, ಬಾಂಗ್ಲಾದೇಶ, ಕೊರಿಯಾ, ನೇಪಾಳ ಸೇರಿದಂತೆ ಮೂವತ್ತು ಪ್ರಸಿದ್ದ ದೇಶಗಳಿಂದ ಪತ್ರಕರ್ತರು ಕಾರ್ಯಾಗಾರಕ್ಕೆ ಆಗಮಿಸುತ್ತಿದ್ದಾರೆ.ಶ್ರೀಲಂಕಾ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ,  ಉದ್ಯಮಿ ಸಂಜಯ ಘೋಡಾವತ್, ಶ್ರೀಲಂಕಾ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಭೋವೆಂಕಾ ಹರ್ಥ, ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಛಲಕಾ ಗಜಬಾಹು, ಭಾರತೀಯ ಕಾರ್ಯನಿರತ ಪತ್ರಕರ್ತರ ರಾಷ್ಟ್ರೀಯ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನ ಸೇರಿದಂತೆ ಕಾನಿಪ ಸಂಘದ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಆಯ್ದ ಹಿರಿಯ ಪತ್ರಕರ್ತರ ಭಾಗವಹಸಲಿದ್ದಾರೆ ಎಂದರು.

    ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾದ್ಯಮ ಕಾರ್ಯಾಗಾರದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಕಾನಿಪ ಸಂಘದ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಜಿಲ್ಲಾ ಘಟಕದ ಪದಾಧಿಕಾರಿಗಳಾದ ಮಂಜುನಾಥ ಪಾಟೀಲ, ಶ್ರೀಕಾಂತ ಕುಬಕಡ್ಡಿ, ನೌಶಾದ್ ಬಿಜಾಪುರ, ಶ್ರೀಶೈಲ ಮಠದ ಸೇರಿದಂತೆ ಇನ್ನಿತರರು ಇದ್ದರು.

    ಬೆಳಗಾವಿಯಲ್ಲಿ ಪತ್ರಕರ್ತರ ಅಂತಾರಾಷ್ಟ್ರೀಯ ಕಾರ್ಯಾಗಾರ ; ಯಾರೆಲ್ಲ ಬರ್ತಿದ್ದಾರೆ ಗೊತ್ತಾ?
    ಸುದ್ದಿಗೋಷ್ಠಿಯಲ್ಲಿ ಅಂತಾರಾಷ್ಟ್ರೀಯ ಮಾದ್ಯಮ ಕಾರ್ಯಾಗಾರದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಘಟಕದ ಗೌರಾವಾಧ್ಯಕ್ಷ ಭೀಮಶಿ ಜಾರಕಿಹೊಳಿ, ಅಧ್ಯಕ್ಷ ದಿಲೀಪ್ ಕುರಂದವಾಡೆ, ಪುಂಡಲೀಕ ಬಾಳೋಜಿ, ಮಂಜುನಾಥ ಪಾಟೀಲ, ಶ್ರೀಕಾಂತ ಕುಬಕಡ್ಡಿ, ನೌಶಾದ್ ಬಿಜಾಪುರ, ಶ್ರೀಶೈಲ ಮಠದ ಸೇರಿದಂತೆ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts