More

    ಪತ್ರಕರ್ತರ ಸಾಮಾಜಿಕ ಕಳಕಳಿ ಅನನ್ಯ

    ಬೆಳಗಾವಿ: ಕರೊನಾ ವೈರಸ್‌ನಿಂದಾಗಿ ಇಡೀ ಜಗತ್ತೇ ಬೆಚ್ಚಿ ಬಿದ್ದಿದೆ. ಅಂತಹ ಸಂದರ್ಭದಲ್ಲಿ ದೇಶ ಸೇವೆಗಾಗಿ ಕಾರ್ಯನಿರ್ವಹಿಸುತ್ತಿರುವ ಹಲವು ಕ್ಷೇತ್ರದಲ್ಲಿನ ಸಿಬ್ಬಂದಿಗಳು ತಮ್ಮ ಜೀವವನ್ನೂ ಲೆಕ್ಕಿಸದೆ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ನಿಯತಿ ಫೌಂಡೇಷನ್ ಸಂಸ್ಥಾಪಕಿ ಡಾ.ಸೋನಾಲಿ ಸರ್ನೊಬತ್ ಹೇಳಿದ್ದಾರೆ.

    ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಭಾಭವನದಲ್ಲಿ ನಿಯತಿ ೌಂಡೇಶನ್ ಹಾಗೂ ಬೆಳಗಾವಿ ಪತ್ರಕರ್ತರ ಸಂಘ ಸಹಯೋಗದಲ್ಲಿ ಮಂಗಳವಾರ ಪತ್ರಕರ್ತರಿಗೆ ಮಾಸ್ಕ್ ವಿತರಿಸಿ ಮಾತನಾಡಿದರು.

    ಕರೊನಾ ವೈರಸ್ ಇಂದು ಇಡೀ ಜಗತ್ತಿನ ನಿದ್ದೆಗೆಡಿಸಿದೆ. ಸಾವಿರಾರು ಸಂಖ್ಯೆಯಲ್ಲಿ ಜನರು ಅಸುನೀಗಿಸದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಸೋಂಕಿತರಾಗಿ ನರಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವೈದ್ಯರು, ಪೊಲೀಸ್, ಸೇನೆ ಹಾಗೂ ಪತ್ರಕರ್ತರು ತಮ್ಮ ಜೀವವನ್ನೂ ಲೆಕ್ಕಿಸದೆ ಸದಾಕಾಲ ಕಾರ್ಯ ಮಾಡುತ್ತಿರುವುದು ಸಾಮಾಜಿಕ ಜವಾಬ್ದಾರಿಯಾಗಿದೆ. ಅಲ್ಲದೆ, ಇದು ದೇಶ ಪ್ರೇಮವನ್ನು ಎತ್ತಿ ತೋರಿಸುತ್ತದೆ. ಪತ್ರಕರ್ತರ ಕಾರ್ಯ ಸಾರ್ವಜನಿಕ ಸಂಪರ್ಕದಲ್ಲಿರುವುದರಿಂದ ಕರೊನಾ ವೈರಸ್‌ನಿಂದ ರಕ್ಷಣೆ ಪಡೆದುಕೊಳ್ಳಬೇಕಿದೆ. ಹೀಗಾಗಿ ಅವರಿಗೆ ಮಾಸ್ಕ್ ವಿತರಣೆ ಮಾಡಲಾಗುತ್ತಿದೆ ಎಂದರು.

    ಬೆಳಗಾವಿ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀಶೈಲ ಮಠದ, ಕೋಶಾಧ್ಯಕ್ಷ ರಾಯಣ್ಣ.ಆರ್.ಸಿ., ಕಾರ್ಯದರ್ಶಿ ಸುರೇಶ ನೇರ್ಲಿ, ಕಾರ್ಯಾಧ್ಯಕ್ಷ ಕುಂತಿನಾಥ ಕಲಮನಿ ಹಾಗೂ ಮಲ್ಲಿಕಾರ್ಜುನ ಮುಗಳಿ, ಜಂಟಿ ಕಾರ್ಯದರ್ಶಿ ಸುನೀಲ ಪಾಟೀಲ, ಜಗದೀಶ ವಿರಕ್ತಮಠ, ರಾಜಶೇಖರಯ್ಯ ಹಿರೇಮಠ, ಕೀರ್ತಿ ಕಾಸರಗೂಡು, ಸುನೀತಾ ದೇಸಾಯಿ, ನಾಗರಾಜ್ ಎಚ್.ವಿ., ಸುಭಾನಿ ಮುಲ್ಲಾ, ಗಜು ಮುಚ್ಚಂಡಿಕರ, ವಿಜಯ ಮೋಹಿತೆ, ವಿಶ್ವನಾಥ ದೇಸಾಯಿ, ಬೈರೋಬಾ ಕಾಂಬಳೆ, ಆಶಿಶ್, ಪಾರೇಶ ಭೋಸಲೆ, ಅಶೋಕ ಮಗದುಮ್ಮ, ಕೀರ್ತಿ ಕಾಸರಗೋಡು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts