More

    ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಜೆ.ಪಿ ನಡ್ಡಾ!

    ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ಹಿರೇಮಠಳ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

    ಇದನ್ನೂ ಓದಿ: ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದ ಡಾ. ವಿಜಯ ಸಂಕೇಶ್ವರ

    ಹುಬ್ಬಳ್ಳಿಯ ಬಿಡನಾಳದಲ್ಲಿರುವ ಮನೆಗೆ ಭಾನುವಾರ ಸಂಜೆ ಭೇಟಿ ನೀಡಿದ ಜೆ.ಪಿ ನಡ್ಡಾ ಅವರು ನೇಹಾಳ ತಂದೆ ನಿರಂಜನ ಹಿರೇಮಠ, ತಾಯಿ ಗೀತಾ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

    ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಜೆ.ಪಿ ನಡ್ಡಾ!

    ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ ಅಗರವಾಲ್, ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್.‌ಪಾಟೀಲ, ಇತರರು ಇದ್ದರು.

    ಪ್ರಕರಣದ ಹಿನ್ನೆಲೆ?: ಏಪ್ರಿಲ್​ 18ರಂದು ಸಂಜೆ 4:45ರ ಸುಮಾರಿಗೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಒಳಗೆ ಮಾರಕಾಸ್ತ್ರಗಳೊಂದಿಗೆ ನುಗ್ಗಿದ್ದ ವ್ಯಕ್ತಿ (ಫಯಾಜ್​), ಎಂಸಿಎ ವಿದ್ಯಾರ್ಥಿನಿ (ನೇಹಾ ಹಿರೇಮಠ್) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಚಿಕಿತ್ಸೆ ಫಲಕಾರಿಗಾದೆ ಮೃತಪಟ್ಟಿದ್ದಾಳೆ. ಈ ಪ್ರಕರಣ ರಾಷ್ಟ್ರವ್ಯಾಪಿ ಸದ್ದು ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫಯಾಜ್​ ಹಾಗೂ ನೇಹಾ ಜೊತೆಗಿರುವ ಫೋಟೋಗಳನ್ನು ಹರಿಬಿಡುವ ಮೂಲಕ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​ ನೀಡಲಾಗಿತ್ತು.

     

    ಹುಬ್ಬಳ್ಳಿಯ ನೇಹಾ ಹತ್ಯೆ ಕೇಸ್​: ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts