ರಾಜಮೌಳಿ ಪುತ್ರನ 'ದಾದಾಸಾಹೇಬ್ ಫಾಲ್ಕೆ' ಬಯೋಪಿಕ್​ನಲ್ಲಿ ಜೂ.ಎನ್​ಟಿಆರ್| NTR

Jr NTR
Published on

JR NTR: ಜೂ.ಎನ್​ಟಿಆರ್ ಅವರು ಸದ್ಯ ‘ವಾರ್ 2’, ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ ಮತ್ತು ‘ದೇವರ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಅವರು ಒಂದು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ ಎನ್ನುವ ಬಗ್ಗೆ ಸುದ್ದಿಗಳು ಹೊರ ಬಿದ್ದಿವೆ.

ಈ ಸಿನಿಮಾ ನಿರ್ಮಾಣ ಮಾಡಲು ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರ ಮಗ ಕಾರ್ತಿಕೇಯ ಹಾಗೂ ಮ್ಯಾಕ್ಸ್ ಸ್ಟುಡಿಯೋ ವರುಣ್ ಗುಪ್ತಾ ಅವರು ಸಿದ್ದರಿದ್ದಾರೆ ಎಂದು ಹೇಳಲಾಗುತ್ತಿದೆ.

ಅವರು ಭಾರತದಲ್ಲಿ ಸಿನಿಮಾ ಹುಟ್ಟಿಗೆ ಕಾರಣರಾದ ದಾದಾಸಾಹೇಬ್ ಫಾಲ್ಕೆ ಅವರ ಬಯೋಪಿಕ್​ನಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಿನಿಮಾವನ್ನು ನಿತಿನ್ ಕಕ್ಕರ್ ನಿರ್ದೇಶನ ಮಾಡುತ್ತಿದ್ದು, ರಾಜಮೌಳಿ ಅವರ ಮಗ ಎಸ್ ಎಸ್ ಕಾರ್ತಿಕೇಯ ಮತ್ತು ವರುಣ್ ಗುಪ್ತಾ ಈ ಸಿನಿಮಾಕ್ಕೆ ಬಂಡವಾಳ ಹಾಕಲಿದ್ದಾರೆ. 'ಮೇಡ್ ಇನ್ ಇಂಡಿಯಾ' 'ಭಾರತೀಯ ಸಿನಿಮಾದ ಹುಟ್ಟು ಮತ್ತು ಉದಯ'ದ ಕಥೆಯನ್ನು ಪ್ರೇಕ್ಷಕರಿಗೆ ನೀಡಲಿದೆ. ಸದ್ಯ ಜೂ. ಎನ್ ಟಿಆರ್ ಪ್ರಶಾಂತ್ ನೀಲ್ ಅವರ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದಾದ ಬಳಿಕ ನೆಲ್ಸನ್ ದಿಲೀಪ್‌ ಕುಮಾರ್ ಅವರ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಾಜಮೌಳಿ ಅವರು ಈಗಾಗಲೇ ಜೂನಿಯರ್ ಎನ್​ಟಿಆರ್ ಜೊತೆ ಮಾತುಕತೆ ನಡೆಸಿದ್ದು, ಅವರು ಕೂಡ ಇದರಲ್ಲಿ ನಟಿಸಲು ಆಸಕ್ತಿ ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಎನ್​ಟಿಆರ್​ 'ದಾದಾ ಸಾಹೇಬ್ ಫಾಲ್ಕೆಯಾಗಿ ಬಣ್ಣ ಹಚ್ಚಲಿದ್ದಾರೆ ಎನ್ನಲಾಗಿದೆ.

(ಏಜೆನ್ಸೀಸ್)

ಜೂನಿಯರ್ ಎನ್​ಟಿಆರ್ ಅವರು ಮಾಸ್ ಸಿನಿಮಾಗಳ ಮೂಲಕ ಗಮನ ಸೆಳೆದವರು. ಅವರು ಈ ರೀತಿಯ ಪಾತ್ರವನ್ನು ಒಪ್ಪಿಕೊಂಡಾಗ ಜನರು ಅದನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net