23.2 C
Bangalore
Saturday, December 14, 2019

ಸಾಮರ್ಥ್ಯ ಉತ್ತಮವಾಗಿದ್ದರೆ ಆತ್ಮವಿಶ್ವಾಸ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಚಿಕ್ಕಮಗಳೂರು: ಪ್ರತಿಯೊಬ್ಬರಲ್ಲಿ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಉತ್ತಮವಾಗಿದ್ದರೆ ಮಾತ್ರ ಆತ್ಮವಿಶ್ವಾಸ ಹೆಚ್ಚಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಉಮೇಶ ಎಂ.ಅಡಿಗ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ರಾಮನಹಳ್ಳಿ ಸಶಸ್ತ್ರ ಮೀಸಲು ಪಡೆಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ಬೆಳಗ್ಗೆ ತ್ರಿವರ್ಣ ಬಲೂನುಗಳನ್ನು ಹಾರಿ ಬಿಡುವ ಮೂಲಕ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕ್ರೀಡಾ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯುವ ಜನಾಂಗ ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಿದ್ದರೆ ಮಾತ್ರ ಬಲಿಷ್ಠವಾದ ದೇಶ ಕಟ್ಟಲು ಸಾಧ್ಯ. ಈ ಹಿನ್ನೆಲೆಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಆರೋಗ್ಯ ಹೊಂದಬೇಕು ಎಂದು ತಿಳಿಸಿದರು.

ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಮತ್ತಿತರ ವ್ಯವಸ್ಥೆಗಳ ಕೊರತೆಯಿಂದಾಗಿ ಅಧಿಕಾರಿಗಳು ಹಾಗೂ ನೌಕರರು ತೀವ್ರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಜನಸಂಖ್ಯೆ ಹೆಚ್ಚಿದಂತೆ ಅಪರಾಧ ಪ್ರಕರಣಗಳೂ ಹೆಚ್ಚಾಗುತ್ತಿವೆ. ಅದನ್ನು ನಿಯಂತ್ರಿಸುವ ಜತೆಗೆ ಸಭೆ, ಸಮಾರಂಭ, ಕಾರ್ಯಕ್ರಮಗಳಿಗೆ ಪೊಲೀಸರು ಸೂಕ್ತ ಭದ್ರತೆ ನೀಡಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಪೊಲೀಸರಲ್ಲಿ ಕಾರ್ಯ ದೊತ್ತಡ ಹೆಚ್ಚಾಗಿರುತ್ತದೆ. ಅದರಿಂದ ಹೊರ ಬರಲು ಇಂತಹ ಕ್ರೀಡಾಕೂಟಗಳು ಅಗತ್ಯ ಎಂದು ಹೇಳಿದರು.

ಪೊಲೀಸ್ ಇಲಾಖೆ ಹಾಗೂ ನ್ಯಾಯಾಂಗ ಇಲಾಖೆಗಳು ಸಹೋದರರಿದ್ದಂತೆ. ಪೊಲೀಸ್ ಇಲಾಖೆಯೇ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ವ್ಯವಸ್ಥಿತವಾಗಿ ನಡೆಸುವುದು ಸಾಮಾನ್ಯ. ಎರಡೂ ಇಲಾಖೆಗಳ ನಡುವೆ ಸಮನ್ವಯತೆ ಮುಖ್ಯ. ಇದರಿಂದ ಸಮಾಜಕ್ಕೆ ನ್ಯಾಯ ಕೊಡಲು ಸಾಧ್ಯ ಎಂದು ತಿಳಿಸಿದರು.

ಚಿಕ್ಕಮಗಳೂರು ಉಪ ವಿಭಾಗ, ಡಿಎಆರ್, ಮಹಿಳಾ ಪೊಲೀಸ್, ತರೀಕೆರೆ, ಕೊಪ್ಪ ಉಪವಿಭಾಗಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಓಟದ ಸ್ಪರ್ಧೆ, ಹಗ್ಗ ಜಗ್ಗಾಟ ಸೇರಿ ವಿವಿಧ ಕ್ರೀಡೆಗಳಲ್ಲಿ ಸೇರಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ ಚೇಂಗಟಿ, ಎಸ್ಪಿ ಹರೀಶ್ ಪಾಂಡೆ, ಪ್ರಭಾರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್.ಎಸ್.ಚಂದ್ರಶೇಖರ್ ಕಾರ್ಯಕ್ರಮದಲ್ಲಿದ್ದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...