More

    ಅಶಾಂತಿ ಸೃಷ್ಟಿಗೆ ಯತ್ನಿಸಿದಾತಗೆ ನ್ಯಾಯಾಂಗ ಬಂಧನ

    ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಪೋಟೋ ಸಹಿತ ಸುಳ್ಳು ಬರವಣಿಗೆ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡುತ್ತಿದ್ದ ಆರೋಪದಡಿ ವಾಮದಪದವು ಪದ್ಮನಾಭ ಸಾಮಂತ ಎಂಬಾತನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಬಂಟ್ವಾಳ ತಹಸೀಲ್ದಾರ್ ಡಾ.ಸ್ಮಿತಾರಾಮು ಆದೇಶಿಸಿದ್ದಾರೆ.

    ಪುಂಜಾಲಕಟ್ಟೆ ಪೊಲೀಸರು ಕಳೆದ ಫೆಬ್ರವರಿಯಲ್ಲಿ ಈತನ ವಿರುದ್ಧ ತಹಸೀಲ್ದಾರ್‌ಗೆ ಪಿ.ಎ.ಆರ್ ನೀಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಮಾಜದ ಸ್ವಾಸ್ಥೃಕೆಡಿಸುತ್ತಿದ್ದ ಆಪಾದನೆಯಡಿ ಈತನ ವಿರುದ್ಧ ಐದಕ್ಕೂ ಅಧಿಕ ಪ್ರಕರಣಗಳಿದ್ದು, ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಕಾರಣವಾಗುವ ಯಾವುದೇ ಪೋಸ್ಟ್‌ಗಳನ್ನು ಹಾಕದಂತೆ ಗರಿಷ್ಠ ಮೊತ್ತದ ಮುಚ್ಚಳಿಕೆ ಬರೆಸುವಂತೆ ತಹಸೀಲ್ದಾರ್‌ಗೆ ಸಲ್ಲಿಸಿದ ಪಿ.ಎ.ಆರ್‌ನಲ್ಲಿ ಪುಂಜಾಲಕಟ್ಟೆ ಎಸೈ ಸುತೇಶ್ ಮನವಿ ಮಾಡಿದ್ದರು.

    ಆ ಬಳಿಕವೂ ಈತ ತನ್ನ ಚಾಳಿ ಮುಂದುವರಿಸಿದ್ದಲ್ಲದೆ, ತಹಸೀಲ್ದಾರ್ ಕೋರ್ಟ್‌ನಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದಂತೆ ಮತ್ತೊಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂಬ ದೂರು ದಾಖಲಾಗಿದೆ. ಈ ದೂರಿಗೆ ಸಂಬಂಧಿಸಿ ಮುಚ್ಚಳಿಕೆ ಪತ್ರ ನೀಡಲು ಆರೋಪಿ ನಿರಾಕರಿಸಿದ ಹಿನ್ನೆಲೆಯಲ್ಲಿ ತಹಸೀಲ್ದಾರರು ಆತನನ್ನು ಐದು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಆದೇಶ ನೀಡಿದ್ದಾರೆ.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts