More

    ಶ್ರೇಷ್ಠವಾದ ತೀರ್ಪುಗಳಿಂದ ನ್ಯಾಯಾಂಗ ವ್ಯವಸ್ಥೆ ಸದೃಢ: ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್

    ಮೈಸೂರು: ನ್ಯಾಯಾಲಯದಿಂದ ಶ್ರೇಷ್ಠವಾದ ತೀರ್ಪುಗಳು ಬಂದರೆ ನ್ಯಾಯಾಂಗ ವ್ಯವಸ್ಥೆ ಮತ್ತಷ್ಟು ಸದೃಢವಾಗುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದರು.


    ಚೆನ್ನೈನ ಸುರಾನ ಮತ್ತು ಸುರಾನ ಅಂತಾರಾಷ್ಟ್ರೀಯ ಕಾನೂನು ಸಂಸ್ಥೆಯ ವತಿಯಿಂದ ಜೆಎಸ್‌ಎಸ್ ಕಾನೂನು ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ 21ನೇ ರಾಷ್ಟ್ರೀಯ ಕಲ್ಪಿತ ನ್ಯಾಯಾಲಯ ಸ್ಪರ್ಧೆ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.

    ವಕೀಲರು ಅತ್ಯುತ್ತಮವಾಗಿ ವಾದ ಮಾಡಿದಾಗ ನ್ಯಾಯಾಧೀಶರು ಅತ್ಯುತ್ತಮವಾದ ತೀರ್ಪು ಕೊಡಲು ಸಾಧ್ಯವಾಗುತ್ತದೆ. ಇದರಿಂದ ನ್ಯಾಯಾಂಗ ವ್ಯವಸ್ಥೆ ಇನ್ನಷ್ಟು ಗಟ್ಟಿಯಾಗುತ್ತದೆ. ಸಾರ್ವಜನಿಕ ವಲಯದಲ್ಲೂ ವಿಶ್ವಾಸ, ನಂಬಿಕೆ ಗಳಿಸಲಿದೆ ಎಂದರು.


    ಬೇರೆ ಬೇರೆ ದೇಶಗಳ ನ್ಯಾಯಾಲಯದ ತೀರ್ಪುಗಳನ್ನು ಆಧಾರವಾಗಿ ಪಡೆಯಲಾಗುತ್ತಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ನಮ್ಮ ದೇಶದ ನ್ಯಾಯಾಲಯದ ತೀರ್ಪುಗಳನ್ನು ಬೇರೆ ದೇಶದ ನ್ಯಾಯಾಲಯಗಳು ಆಧಾರವಾಗಿ ಪರಿಗಣಿಸುತ್ತಿವೆ. ಇದು ಉತ್ತಮ ಬೆಳವಣಿಗೆ. ಇದು ದೇಶದ ನ್ಯಾಯಾಂಗ ವ್ಯವಸ್ಥೆಯ ಗೌರವ ಹೆಚ್ಚಿಸುತ್ತದೆ ಎಂದರು.


    ದೇಶದ ಪ್ರತಿಯೊಬ್ಬ ಪ್ರಜೆಯೂ ಮೂಲಭೂತ ಹಕ್ಕುಗಳನ್ನು ಅನುಭವಿಸುವುದರೊಂದಿಗೆ ಮೂಲಭೂತ ಕರ್ತವ್ಯಗಳನ್ನೂ ನಿಷ್ಠೆಯಿಂದ ಪಾಲಿಸಬೇಕು. ಆಗ ಮಾತ್ರ ಸದೃಢ ಭಾರತ ನಿರ್ಮಾಣವಾಗಲಿದೆ ಎಂದರು.


    ಡಿಆರ್‌ಟಿ-2 ಪೀಠಾಧ್ಯಕ್ಷರಾದ ಗೌರಮ್ಮ, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ, ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಕೆ.ಎಸ್.ಸುರೇಶ್, ಹಿರಿಯ ವಕೀಲ ಜಿ.ಶಿವದಾಸ್, ಪ್ರಾಂಶುಪಾಲ ಡಾ.ಎಸ್.ನಾಗರಾಜು ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts