More

  ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ

  ಸಕಲೇಶಪುರ: ತಾಲೂಕಿನ ವಾಟೇಹಳ್ಳಿ ಎಸ್ಟೇಟ್‌ನಲ್ಲಿ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದೆ.

  ವಾಟೇಹಳ್ಳಿ ಎಸ್ಟೇಟ್‌ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ದಿವಾಕರ್ ಶೆಟ್ಟಿ(60) ಗಾಯಗೊಂಡವರು. ಗುರುವಾರ ಎಸ್ಟೇಟ್‌ನ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಡಾನೆ ದಿಢೀರ್ ದಾಳಿ ನಡೆಸಿದ್ದು, ಇದರಿಂದ ಕಾಲಿಗೆ ಪೆಟ್ಟು ಬಿದ್ದಿದೆ. ಸುತ್ತಲಿನ ಜನರು ಕೂಗಾಟ ನಡೆಸಿದ್ದರಿಂದ ಕಾಡಾನೆ ಸ್ಥಳದಿಂದ ಕಾಲ್ಕಿತ್ತಿದೆ.
  ಗಾಯಾಳುವಿಗೆ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

  See also  ಶಂಕರಾಚಾರ್ಯರಿಂದ ಸಮಾಜಕ್ಕೆ ಅನೇಕ ಗ್ರಂಥಗಳ ಕೊಡುಗೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts