More

    ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಕ್ರಮ

    ಬೆಳಗಾವಿ: ಲೋಕಸಭಾ ಉಪ ಚುನಾವಣೆಯನ್ನು ಸುಗಮ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಅಗತ್ಯವಿರುವ ಎಲ್ಲ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ಹರೀಶ ಕುಮಾರ ತಿಳಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಭ್ಯರ್ಥಿಗಳ ಜತೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ವ್ಯವಸ್ಥಿತ ಮತದಾನಕ್ಕಾಗಿ ಚುನಾವಣಾ ಆಯೋಗದ ನಿರ್ದೇಶನದಂತೆಯೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಸಿಬ್ಬಂದಿ ನಿಯೋಜನೆ: ಈಗಾಗಲೇ ಮತಗಟ್ಟೆಗಳಲ್ಲಿ ಕಲ್ಪಿಸಲಾಗಿರುವ ಮೂಲಸೌರ್ಯ, ಭದ್ರತೆ, ವಿಡಿಯೋಗ್ರಾಫರ್‌ಗಳ ನಿಯೋಜನೆ, ವೆಬ್ ಕ್ಯಾಸ್ಟಿಂಗ್ ಸೇರಿ ಮತ್ತಿತರ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅಲ್ಲದೆ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಸಂಬಂಧಿಸಿದಂತೆ ಆಯೋಗದ ಮಾರ್ಗಸೂಚಿ ಪ್ರಕಾರ ಭದ್ರತಾ ಸಿಬ್ಬಂದಿ ನಿಯೋಜನೆ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಭ್ಯರ್ಥಿಗಳಿಂದಲೂ ಸಲಹೆ ಪಡೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಇವಿಎಂ ಪ್ರಾತ್ಯಕ್ಷಿಕೆ: ಇದೇ ಸಂದರ್ಭದಲ್ಲಿ ಉಪ ಚುನಾವಣೆಗೆ ಬಳಸಲಾಗುವ ವಿದ್ಯುನ್ಮಾನ ಮತಯಂತ್ರ (ಇವಿಎಂ) ಹಾಗೂ ವಿವಿಪ್ಯಾಟ್‌ಗಳನ್ನು ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಹಾಗೂ ಅವರ ಪ್ರತಿನಿಧಿಗಳ ಸಮ್ಮುಖದಲ್ಲಿ ದ್ವಿತೀಯ ಹಂತದ ಪ್ರಾತ್ಯಕ್ಷಿಕೆ ನಡೆಸಲಾಯಿತು. ಸಂಪೂರ್ಣ ಕಂಪ್ಯೂಟರೀಕೃತವಾಗಿರಲಿದ್ದು, ಒಟ್ಟಾರೆ 2,566 ಬ್ಯಾಲೆಟ್ ಯುನಿಟ್, 2,566 ಕಂಟ್ರೋಲ್ ಯುನಿಟ್ ಹಾಗೂ 2,566 ವಿವಿಪ್ಯಾಟ್‌ಗಳನ್ನು ಹಂಚಿಕೆ ಮಾಡಿರುವ ಕುರಿತು ಜಿಲ್ಲಾ ಚುನಾವಣಾಧಿಕಾರಿ ಡಾ.ಹರೀಶಕುಮಾರ ಮಾಹಿತಿ ನೀಡಿದರು.

    ಉಪ ಚುನಾವಣಾ ಸಾಮಾನ್ಯ ವೀಕ್ಷಕ ಡಾ.ಚಂದ್ರಭೂಷಣ ತ್ರಿಪಾಠಿ, ನಗರ ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ, ಎಸ್ಪಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಎಸ್., ವಿವಿಧ ಪಕ್ಷಗಳ ಪ್ರತಿನಿಧಿಗಳು, ಅಭ್ಯರ್ಥಿಗಳ ಪರ ಪ್ರತಿನಿಧಿಗಳು ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡಿದ್ದರು.

    ಅಕ್ರಮ ತಡೆಗಟ್ಟಲು ತಂಡಗಳ ರಚನೆ

    ಬೆಳಗಾವಿ ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ವ್ಯಾಪ್ತಿಯಲ್ಲಿನ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಗೋಕಾಕ ವಲಯ ವ್ಯಾಪ್ತಿಯಲ್ಲಿ ಅಬಕಾರಿ ಅಧಿಕಾರಿಗಳಾದ ಕೆ.ಪ್ರಶಾಂತಕುಮಾರ (ಮೊ. 9449597077), ಆನಂದ ಉಕ್ಕಲಿ (ಮೊ. 8660521533), ಹನುಮಂತರಾಯ ವಜ್ರಮಟ್ಟಿ (ಮೊ. 9480388658), ಮಂಜುನಾಥ ಮಾಲಿಪಾಟೀಲ (ಮೊ. 9449597076), ಅಮೃತ ಗುಡಿ (ಮೊ. 8618948363), ಜಟ್ಟೆಪ್ಪ ಮಾಳಾಬಾಗಿ (ಮೊ. 7760570183), ಸುನೀಲ ಸುಡುಗಾಡದ (8431720469), ರವೀಂದ್ರ ಪಾಟೀಲ (ಮೊ. 9686060160), ದೌಲತರಾಯ (ಮೊ. 9686824969) ಅವರ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts