More

  ಹೈಕೋರ್ಟ್​ ನ್ಯಾಯಮೂರ್ತಿ ಹುದ್ದೆಗೆ ಅಭಿಜಿತ್ ಗಂಗೋಪಾಧ್ಯಾಯ ರಾಜೀನಾಮೆ; ಬಿಜೆಪಿ ಸೇರ್ಪಡೆಗೆ ನಿರ್ಧಾರ

  ಕಲ್ಕತ್ತಾ: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಅದಕ್ಕೆ ಮುನ್ನುಡಿ ಎಂಬಂತೆ ಚಿತ್ರ ನಟರು, ಮಾಜಿ ಕ್ರೀಡಾ ತಾರೆಯರು ಹಾಗೂ ಸರ್ಕಾರಿ ಅಧಿಕಾರಿಗಳು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯ ಪಕ್ಷಗಳನ್ನು ಸೇರುತ್ತಿದ್ದಾರೆ. ಇದೀಗ ಮಹತ್ವದ ಬೆಳವಣಿಗೆ ಒಂದರಲ್ಲಿ ಕಲ್ಕತ್ತಾ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿದ್ದ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.

  ರಾಜೀನಾಮೆ ನೀಡಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಅಭಿಜಿತ್​, ಪಶ್ಚಿಮ ಬಂಗಾಳದಲ್ಲಿರುವ ಭ್ರಷ್ಟ ತೃಣಮೂಲ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹೋರಾಡುವ ಸಲುವಾಗಿ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.

  ಭ್ರಷ್ಟಾಚಾರಕ್ಕೆ ಸಮಾನಾರ್ಥಕ ಪದ ಯಾವುದಾದರೂ ಇದ್ದರೆ ಅದು ತೃಣಮೂಲ ಕಾಂಗ್ರೆಸ್​ ಎಂದು ಹೇಳಬಹುದಾಗಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಎಂದರೆ ಅದು ಬಿಜೆಪಿ ಹಾಗಾಗಿ ನಾನು ಮಾರ್ಚ್​ 07ರಂದು ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ.

  ಇದನ್ನೂ ಓದಿ: ಪಾಕ್​ ನೂತನ ಪ್ರಧಾನಿಯ ಐದನೇ ಮದುವೆ ರಹಸ್ಯ ಬಯಲು; ಆದರೆ ಕಿರಿಯ ಬೇಗಂ ಹೇಳಿದ್ದೆ ಬೇರೆ

  ಕಳೆದ ಕೆಲ ದಿನಗಳಿಂದ ಟಿಎಂಸಿ ನಾಯಕರು ನನ್ನ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಾನು ನೀಡಿದ ತೀರ್ಪು ಇಷ್ಟವಾಗಿಲ್ಲವೆಂದರೆ ನ್ಯಾಯಾಧೀಶರ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆಗಳನ್ನು ಕೊಡುವುದು ನನಗೆ ಇಷ್ಟವಾಗುತ್ತಿಲ್ಲ. ಈ ರೀತಿಯ ಪ್ರಚೋದನಕಾರಿ ಹೇಳಿಕೆಗಳು ನನ್ನನ್ನು ರಾಜಕೀಯ ಸೇರುವುದಕ್ಕೆ ಪ್ರೇರೆಪಿಸಿತ್ತು.

  ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಅವನತಿ ಶುರುವಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇದು ತಿಳಿಯಲಿದೆ. 2009ರಲ್ಲಿ ಸಿಪಿಐ (ಎಂ) ನೇತೃತ್ವದ ಎಡರಂಗವು ಹೀನಾಯವಾಗಿ ಸೋತ ನಂತರ ಅದು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ಇದು ಪುನರಾವರ್ತನೆಯಾಗಲಿದ್ದು, ಈ ಬಾರಿ ಟಿಎಂಸಿ ಅಧಿಕಾರದಿಂದ ಕೆಳಗಿಳಿಯುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಕುರಿತು ಬಿಜೆಪಿ ಹೈಕಮಾಂಡ್​ ನಿರ್ಧಾರ ಮಾಡುತ್ತದೆ. ನನ್ನ ಸ್ಪರ್ದೆ ಬಗ್ಗೆ ನಾನಿನ್ನು ನಿರ್ಧಾರ ಮಾಡಿಲ್ಲ. ನನ್ನ ಗುರ ಇರುವುದು ಒಂದೇ ರಾಜ್ಯದಲ್ಲಿರುವ ಭ್ರಷ್ಟ ಟಿಎಂಸಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದು ಎಂದು ಅಭಿಜಿತ್ ಗಂಗೋಪಾಧ್ಯಾಯ ಹೇಳಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts