ವಿಜಯವಾಣಿ ಸುದ್ದಿಜಾಲ ಕೋಟ
ದಲಿತ ಸಂಘಟನೆ ತನ್ನ ಚಳುವಳಿಯ ಮೂಲಕ ಸಮುದಾಯದ ಏಳಿಗೆಗೆ ಶ್ರಮಿಸಿ ಮುಂಚೂಣಿಗೆ ತಂದಿರಿಸಿದೆ. ದಲಿತ ಸಮುದಾಯ ಯಾವುದೇ ಕ್ಷೇತ್ರದಲ್ಲಿ ಹಿಂದೆ ಬಿದ್ದಿಲ್ಲ. ಸಾಕಷ್ಟು ಹೋರಾಟದ ಮೂಲಕ ಸಮುದಾಯದ ಜನರಿಗೆ ನ್ಯಾಯ ಒದಗಿಸಿದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಹೇಳಿದರು.
ಕೋಟ ಸಿಎ ಬ್ಯಾಂಕ್‌ನ ಬಿ.ಸಿ. ಹೊಳ್ಳ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಕೋಟ ಹೋಬಳಿ ಆಶ್ರಯದಲ್ಲಿ 26ನೇ ವರ್ಷದ ಉಚಿತ ನೋಟ್ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಅಕ್ಷರದಕ್ಕರೆ-2025 ಕಾರ್ಯಕ್ರಮ ಉದ್ಘಾಟಿಸಿ ಭಾನುವಾರ ಮಾತನಾಡಿದರು.
ಗಣ್ಯರಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈಯಲಾಯಿತು. ಸಮುದಾಯದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಲ್ಲಿಸಲಾಯಿತು.
ದಲಿತ ಸಂಘರ್ಷ ಸಮಿತಿ ಕೋಟ ಹೋಬಳಿ ಸಂಚಾಲಕ ನಾಗರಾಜ್ ಪಡುಕರೆ ಸಭೆ ಅಧ್ಯಕ್ಷತೆ ವಹಿಸಿದ್ದರು. ಕೋಟದ ಗೀತಾನಂದ ೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್, ಕೋಟ ಆರಕ್ಷಕ ಠಾಣೆ ಠಾಣಾಧಿಕಾರಿ ರಾಘವೇಂದ್ರ ಪಿ., ಕೋಟ ಸಹಕಾರ ವ್ಯವಸಾಯಕ ಸಂಘ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ದಲಿತ ಸಂಘರ್ಷ ಸಮಿತಿ ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮಸುಂದರ್ ತೆಕ್ಕಟ್ಟೆ, ಕುಂದಾಪುರ ತಾಲೂಕು ಸಂಚಾಲಕ ರಾಜು ಬೆಟ್ಟಿನಮನೆ, ಕೋಟ ಪಂಚಾಯಿತಿ ಸದಸ್ಯೆ ಶಾಂತಾ, ಬೇಳೂರು ಗ್ರಾ.ಪಂ. ಮಾಜಿ ಅಧ್ಯಕ್ಷೆ ಪವಿತ್ರಾ, ಪ್ರಮುಖರಾದ ಕುಮಾರ್ ಕೋಟ, ಸುರೇಶ್ ಹಕ್ಲಾಡಿ, ಶಿವರಾಜ್ ಬೈಂದೂರು ಉಪಸ್ಥಿತರಿದ್ದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ್ ಗಿಳಿಯಾರು ಸ್ವಾಗತಿಸಿದರು. ಕೋಟ ಹೋಬಳಿ ಸಂಚಾಲಕ ಪ್ರಭಾಕರ್ ಪಡುಕರೆ ನಿರೂಪಿಸಿದರು.