More

    48ನೇ ಸಿಜೆಐ ಆಗಿ ನ್ಯಾಯಮೂರ್ತಿ ಎನ್​.ವಿ.ರಮಣ ಪ್ರಮಾಣ ವಚನ ಸ್ವೀಕಾರ

    ನವದೆಹಲಿ : ಭಾರತದ 48 ನೇ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಗಳಾಗಿ ನ್ಯಾಯಮೂರ್ತಿ ನುತಲಪತಿ ವೆಂಕಟ ರಮಣ ಅವರು ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. 63 ವರ್ಷದ ಮುಖ್ಯ ನ್ಯಾಯಮೂರ್ತಿ ರಮಣ ಅವರು ಒಂದು ವರ್ಷ ಮತ್ತು ನಾಲ್ಕು ತಿಂಗಳು (2022 ರ ಆಗಸ್ಟ್ 26 ರ ಸೇವಾ ನಿವೃತ್ತಿ ದಿನದವರೆಗೆ) ದೇಶದ ನ್ಯಾಯಾಂಗದ ಉನ್ನತ ಹುದ್ದೆಯನ್ನು ಅಲಂಕರಿಸಲಿದ್ದಾರೆ.

    ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ರಾಮ್​ ನಾಥ್ ಕೋವಿಂದ್ ಅವರು ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕಾನೂನು ಸಚಿವರಾದ ರವಿ ಶಂಕರ್ ಪ್ರಸಾದ್ ಉಪಸ್ಥಿತರಿದ್ದರು.

    ಇದನ್ನೂ ಓದಿ: ಸುಪ್ರೀಂ ಕೋರ್ಟ್​​ಗೆ ಭಾವನಾತ್ಮಕ ವಿದಾಯ ಹೇಳಿದ ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ

    ಆಗಸ್ಟ್ 27, 1957 ರಂದು ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಕೃಷಿ ಕುಟುಂಬದಲ್ಲಿ ಜನಿಸಿದ ನ್ಯಾಯಮೂರ್ತಿ ರಮಣ ಅವರು ಆಂಧ್ರಪ್ರದೇಶದಿಂದ ಸಿಜೆಐ ಹುದ್ದೆಯನ್ನು ಏರಿರುವ ಎರಡನೇ ವ್ಯಕ್ತಿಯಾಗಿದ್ದಾರೆ. ನ್ಯಾಯಮೂರ್ತಿ ಕೆ.ಸುಬ್ಬರಾವ್ ಅವರು 1966-67ರವರೆಗೆ ಭಾರತದ 9ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

    ಸುಮಾರು ನಾಲ್ಕು ದಶಕಗಳ ಹಿಂದೆ ವಕೀಲ ವೃತ್ತಿ ಆರಂಭಿಸಿದ ಮುಖ್ಯ ನ್ಯಾಯಮೂರ್ತಿ ರಮಣ, ಆಂಧ್ರಪ್ರದೇಶದ ಹೈಕೋರ್ಟ್, ಆಡಳಿತ ನ್ಯಾಯಮಂಡಳಿಗಳು ಮತ್ತು ಸರ್ವೋಚ್ಚ ನ್ಯಾಯಾಲಯಗಳಲ್ಲಿ ನಾಗರಿಕ, ಅಪರಾಧ, ಸಾಂವಿಧಾನಿಕ, ಕಾರ್ಮಿಕ, ಸೇವೆ ಮತ್ತು ಚುನಾವಣಾ ವಿಷಯಗಳಲ್ಲಿ ವಕಾಲತ್ತು ನಡೆಸಿದ್ದಾರೆ.

    ಅವರನ್ನು ಜೂನ್ 27, 2000 ರಂದು ಆಂಧ್ರಪ್ರದೇಶ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾಗಿ ನೇಮಿಸಲಾಯಿತು. ಮಾರ್ಚ್ 10, 2013 ರಿಂದ ಮೇ 20, 2013 ರವರೆಗೆ ಆಂಧ್ರಪ್ರದೇಶದ ಹೈಕೋರ್ಟ್‌ನ ಉಸ್ತುವಾರಿ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಿದರು. 2013 ರ ಮೇ ತಿಂಗಳಲ್ಲಿ ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸಿದ್ದು, 2014 ರಲ್ಲಿ ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಗಳಾಗಿ ಉನ್ನತೀಕರಿಸಲಾಯಿತು. (ಏಜೆನ್ಸೀಸ್)

    ಮದುವೆ ನಿಶ್ಚಯ ಮಾಡಿ ಹಿಂತಿರುಗುತ್ತಿದ್ದರು… ಸೇತುವೆ ದಾಟುವಾಗ ನಡೆಯಿತು ದುರಂತ !

    ಕರೊನಾ ರೋಗಿಗಳ ಕ್ವಾರಂಟೈನ್​​ ಸೌಲಭ್ಯಕ್ಕೆ ಕ್ರೀಡಾಂಗಣ ಸಜ್ಜು !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts